More

    ಲೋಕಸಭೆ ಚುನಾವಣೆ; ಬಿಜೆಪಿ-ಜೆಡಿಎಸ್​ ಮೈತ್ರಿಗೆ ಅಮಿತ್​​ ಷಾ ಒಪ್ಪಿಗೆ: ಬಿ.ಎಸ್. ಯಡಿಯೂರಪ್ಪ

    ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೊಸ ಸಂಚಲನ ಒಂದನ್ನು ಸೃಷ್ಟಿಸಿದ್ದಾರೆ. ​

    ​ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಬಿಎಸ್​ವೈ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಬಿಜೆಪಿ-ಜೆಡಿಎಸ್​ ಮೈತ್ರಿಗೆ ಒಪ್ಪಿದ್ದಾರೆ. ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

    ಜೆಡಿಎಸ್​ ಜೊತೆಗಿನ ಮೈತ್ರಿಯಿಂದ ನಮಗೆ ಇನ್ನಷ್ಟು ಶಕ್ತಿ ಬರುತ್ತದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಈ ಮೈತ್ರಿ ಸಹಕಾರಯಾಗಲಿದೆ. ಈ ಸಂಬಂಧ ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

    devegowda shah

    ಇದನ್ನೂ ಓದಿ: ಸನಾತನ ಹೇಳಿಕೆ ವಿವಾದ; ಪ್ರಧಾನಿ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು: ಸಿಎಂ ಸಿದ್ದರಾಮಯ್ಯ

    ಸುದ್ದಿ ಮೂಲಗಳ ಪ್ರಕಾರ ಪ್ರಜ್ವಲ್​ ರೇವಣ್ಣ ಅನರ್ಹತೆ ಸಂಬಂಧ ವಕೀಲರೊಂದಿಗೆ ಚರ್ಚಿಸಲು ಇತ್ತೀಚಿಗೆ ದೇವೇಗೌಡರು ದೆಹಲಿಗೆ ತೆರಳಿದ್ದರು. ಈ ವೇಳೆ ಅವರು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕ ಚರ್ಚೆ ನಡೆದಿತ್ತು ಎನ್ನಲಾಗಿದೆ.

    ಜೆಡಿಎಸ್​ ಪ್ರಾಬಲ್ಯ ಹೆಚ್ಚಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ ಹಾಗೂ ಮಂಡ್ಯದಲ್ಲಿ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸುವುದಾಗಿ ಉಭಯ ನಾಯಕರ ನಡುವೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಒಂದು ವೇಳೆ ಬಿಜೆಪಿ ಹೈಕಮಾಂಡ್​ ದೇವೇಗೌಡರ ಷರತ್ತಿಗೆ ಒಪ್ಪಿದ್ದಲ್ಲಿ ಸೆಪ್ಟೆಂಬರ್​ 10ರ ನಂತರ ಮೈತ್ರಿ ನಿರ್ಧಾರ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts