ಗದಗ: ರಾಜ್ಯದಲ್ಲಿ ಲೋಕಸಭೆ ಚುಣಾವಣೆಯ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸೀಟು ಗೆಲ್ಲುವ ಮೂಲಕ ರಾಷ್ಟ್ರರಾಜಕಾರಣಕ್ಕೆ ಸ್ಪಷ್ಟ ಸಂದೇಶ ರವಾನಿಸಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನ ಅತೃಪ್ತ ನಾಯಕರಿಗೆ ಗಾಳ ಹಾಕುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ RSS ಗಣವೇಷದಲ್ಲೇ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ಸೇರ್ಪಡೆಯಾಗಿರುವ ಘಟನೆ ಗದಗದಲ್ಲಿ ನಡೆದಿದೆ.
ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎಂಬುವವರು RSS ಗಣವೇಷದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಎಲ್ಲರ ಗಮನ ಸೆಳೆದಿದೆ. ಸಚಿವ ಶಿವಾನಂದ್ ಪಾಟೀಲ್, ಮಾಜಿ ಸಚಿವ ಬಿಆರ್ ಯಾವಗಲ್, ಮಾಜಿ ಶಾಸಕ ಎಸ್ಜಿ ನಂಜಯ್ಯನಮಠ ಬಾಣದ್ ಅವರನ್ನು ಕಾಂಗ್ರೆಸ್ಗೆ ಸ್ವಾಗತಿಸಿದ್ದಾರೆ.
ಇದನ್ನೂ ಓದಿ: ಸಾರ್ವಕಾಲಿಕ ದಾಖಲೆ ಬರೆದ ಪುಷ್ಪ-2 ಟೀಸರ್; ಇದರ ಹಿಂದಿದೆ ಅಚ್ಚರಿ ವಿಷಯ
ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ನಿಂಗಬಸಪ್ಪ ಬಾಣದ್, ಬಿಜೆಪಿ ನರಗುಂದ ಮತ ಕ್ಷೇತ್ರದಲ್ಲಿ ಹಣ ಹಂಚಿ ಚುನಾವಣೆ ಮಾಡಿದೆ. ಭ್ರಷ್ಟಾಚಾರ ವಿರೋಧಿಯಾಗಿ ಬಿಜೆಪಿ ಪಕ್ಷ ತೊರೆದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ತರುತ್ತೇನೆ ಅಂತಾರೆ. ಆದ್ರೆ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮಾಡಿಸುತ್ತಾರೆ. ಇದು ಯಾವ ನ್ಯಾಯ ಎಂದು ನಿಂಗಬಸಪ್ಪ ಬಾಣದ್ ಟೀಕಿಸಿದ್ದಾರೆ.
ನಿಂಗಬಸಪ್ಪ ಬಾಣದ್ ಅವರ ತಲೆ ಮೇಲಿನ ಕಪ್ಪು ಟೋಪಿ ತೆಗೆದು ಖಾದಿ ಗಾಂಧಿ ಟೋಪಿ ಹಾಕಿ ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಮಾಡಿಕೊಂಡಿದ್ದು ವಿಶೇಷವಾಗಿತ್ತು.