More

    ಬಿಜೆಪಿ ಹೈಕಮಾಂಡ್​ ಭೇಟಿಯಾದ ಸೋಮಣ್ಣ: ಅಮಿತ್ ಶಾ ನೀಡಿದ ಸಲಹೆ ಏನು?

    ನವದೆಹಲಿ: ಬಿಜೆಪಿಯಲ್ಲಿ ಅಸಮಾಧಾನಗೊಂಡಿದ್ದ ಹಿರಿಯ ನಾಯಕ ವಿ.ಸೋಮಣ್ಣ 4 ದಿನ ಕಾದ ಬಳಿಕ ಕಡೆಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿದರು. ಇಬ್ಬರ ನಡುವೆ 20 ನಿಮಿಷ ಮಾತುಕತೆ ನಡೆದಿದ್ದು, ವಿಧಾನಸಭಾ ಚುನಾವಣೆ ಸೋಲಿಗೆ ಕಾರಣವೇನು ಎಂಬುದರ ಕುರಿತು ಸೋಮಣ್ಣ ವಿವರಿಸಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಮೋದಿ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ: ದೇವೇಗೌಡ

    ಇನ್ನು ಇದೇ ಸಂದರ್ಭದಲ್ಲಿ ಸೋಮಣ್ಣ, ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡವಂತೆ ಅಮಿತ್ ಶಾ ಬಳಿ ಮನವಿ ಮಾಡಿದ್ದಾರೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಅಮಿತ್ ಶಾ ಮನವಿ ಮಾಡಿದ್ದಾರೆ. ಯಾವುದಕ್ಕೂ ತುಮಕೂರು ಸೀಟು ಹಂಚಿಕೆ ಬಳಿಕ ನಿರ್ಧಾರ ಮಾಡುತ್ತೇನೆ ಎಂದು ಸೋಮಣ್ಣ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಮೂರು ಎಂಪಿ ಗೆಲ್ಲಿಸಿಕೊಡುವೆ: ಬಿಜೆಪಿ ಹೈಕಮಾಂಡ್ ಜತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಪಕ್ಷದ ಮುಖ್ಯವಾಹಿನಿಯಲ್ಲಿ ಇರುವಂತೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ರಾಜ್ಯಸಭಾ ಸ್ಥಾನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ 3 ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಡುವುದಾಗಿ ಹೇಳಿದ್ದೇನೆ ಎಂದರು.

    ಇದಿಷ್ಟೇ ಅಲ್ಲ, ಇನ್ನೂ ಕೆಲವು ಪ್ರಮುಖ ವಿಚಾರಗಳನ್ನು ಹೈಕಮಾಂಡ್​ ಬಳಿ ಚರ್ಚಿಸಿದ್ದೇನೆ. ಅದೆಲ್ಲದರ ವಿವರಗಳನ್ನು ಬಹಿರಂಗವಾಗಿ ಹೇಳಲಾಗದು. ಅಮಿತ್​ ಶಾ ಭೇಟಿ ಸಮಾಧಾನ ತಂದಿದೆ. ನನ್ನ ಸೇವೆಯನ್ನು ಬಳಸಿಕೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

    ಸೆಟೆದು ನಿಂತಿದ್ದ ಸೋಮಣ್ಣ:  ಮೇನಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋತಿದ್ದ ಸೋಮಣ್ಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಬಹಿರಂಗ ಟೀಕೆಗಳಳನ್ನು ಮಾಡಿದ್ದರಷ್ಟೇ ಅಲ್ಲದೆ, ಇನ್ನೇನು ಕಾಂಗ್ರೆಸ್ ಸೇರಿಯೇ ಬಿಟ್ಟರು ಎಂಬ ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಅವರು ಇದೀಗ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

    ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಶಾಸಕ ಯತ್ನಾಳ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts