More

    ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪಟ್ಟು; ಅಹೋರಾತ್ರಿ ಧರಣಿಗೆ ನಿರ್ಧಾರ

    ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ನಡೆಸಲು ಅನುಮತಿ ಕೋರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಬಿಜೆಪಿ ಸದಸ್ಯರು, ಶಾಸಕ ಅರವಿಂದ್​ ಬೆಲ್ಲದ್​ ಹಾಗೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

    ಈದ್ಗಾ ಮೈದಾನದಲ್ಲಿ ಗಣೇಶೋತ್ಸವ್ಕಕೆ ಪಾಲಿಕೆ ಆಯುಕ್ತರು ಅನುಮತಿ ನಿರಾಕಸಿರುವುದನ್ನು ಖಂಡಿಸಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸದಸ್ಯರು ಭಜನೆ, ಹಾರ್ಮೋನಿಯಂ‌ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪ್ರತಿಭಟನೆ ನಡೆಸುವ ಮೂಲಕ ಪಾಲಿಕೆ ವಿರುದ್ಧ ವಿಭಿನ್ನವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ.

    ಶಾಸಕ ಅರವಿಂದ್​ ಬೆಲ್ಲದ್​ ಮಾತನಾಡಿ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ನಡೆಸಲು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಆದರೆ, ಪಾಲಿಕೆ ಆಯುಕ್ತರು ಇದಕ್ಕೆ ಅನುಮತಿ ನೀಡುತ್ತಿಲ್ಲ. ಈ ಸಂಬಂಧ ಆಯುಕ್ತರನ್ನು ಭೇಟಿ ಮಾಡಲಾಗಿದ್ದು, ಅವರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಅನುಮತಿ ಸಿಗುವವರೆಗೂ ಪಾಲಿಕೆಯ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ.

    Edgah Protest

    ಇದನ್ನೂ ಓದಿ: ಸನಾತನ ಧರ್ಮವನ್ನು ನಾಶ ಮಾಡಲು ಘಮಂಡಿಯಾ ಒಕ್ಕೂಟವು ಸಂಕಲ್ಪ ಮಾಡಿದೆ: ಪ್ರಧಾನಿ ಮೋದಿ

    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರವು ಹಿಂದೂಗಳ ಭಾವನೆಯೊಂದಿಗೆ ಆಟವಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರಲು ಬರೀ ಮುಸ್ಲಿಮರಷ್ಟೇ ಅಲ್ಲ ಹಿಂದೂಗಳು ಸಹ ಮತ ನೀಡಿದ್ದಾರೆ ಎಂಬುದನ್ನು ಮೊದಲು ಅರಿಯಬೇಕು. ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಈದ್ಗಾ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿ ನೀಡಲು ಪಾಲಿಕೆಗೆ ಅವಕಾಶವಿದೆ. ಬರೀ ಮುಸ್ಲೀಂ ಧರ್ವೀರಯ ಕಾರ್ಯಕ್ರಮಗಳಿಗೆ ಅವಕಾಶ ನೀಡುವಂತೆ ಎಲ್ಲೂ ಸಹ ಹೇಳಿಲ್ಲ. ಹೀಗಾಗಿ ಕಳೆದ ಸಲದಂತೆ ಈ ಬಾರಿಯೂ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಬೇಕು ಇಲ್ಲವಾದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಶಾಸಕ ಅರವಿಂದ್​ ಬೆಲ್ಲದ್​ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts