More

    ದೇಶದ ಭವಿಷ್ಯಕ್ಕೆ ಮೋದಿ ಅನಿವಾರ್ಯ

    ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ

    ಹೊಸಕೋಟೆಯಲ್ಲಿ ಬಿಜೆಪಿ ಮುಖಂಡರ ಸಭೆ


    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತದ ಚಿತ್ರಣವನ್ನೇ ಬದಲಿಸಿದ್ದಾರೆ, ಮತ್ತೊಮ್ಮೆ ಅವರಿಗೆ ದೇಶದ ಪ್ರಧಾನಿಯಾಗುವ ಅವಕಾಶ ಮಾಡಿಕೊಡುವ ಮೂಲಕ ದೇಶದ ಭವಿಷ್ಯವನ್ನು ಮತ್ತಷ್ಟು ಉಜ್ವಲಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಕರೆ ನೀಡಿದರು.
    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವಿಗಾಗಿ ಹೊಸಕೋಟೆಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಕ್ಷೇತ್ರದ ಎಲ್ಲ ಪಂಚಾಯಿತಿಯ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು, 10 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಬೇಕು, ದೇಶದ ಭವಿಷ್ಯದ ದೃಷ್ಟಿಯಲ್ಲಿ ಮೋದಿ ಅವರ ಗೆಲುವು ಅತೀ ಮುಖ್ಯವಾಗಿದೆ ಇದನ್ನು ಮತದಾರರಿಗೆ ಮನದಟ್ಟು ಮಾಡಿಕೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಚುನಾವಣೆ ದಿನಾಂಕ ಹತ್ತಿರವಾಗುತ್ತಿದೆ, ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಚುರುಕುಗೊಳಿಸಬೇಕು, ಎಲ್ಲ ಮುಖಂಡರೊಂದಿಗೆ ಸಮನ್ವಯತೆಯಿಂದ ನಡೆದುಕೊಳ್ಳಬೇಕು, ಕೇಂದ್ರದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಅವಧಿಯಲ್ಲಿಯ ಪ್ರತಿ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು, ದೇಶದ ಭದ್ರತೆ, ಸರ್ವಾಂಗೀಣ ಪ್ರಗತಿಗೆ ಮೋದಿ ಅವರ ಅವಶ್ಯಕತೆ ಬಗ್ಗೆ ಮತದಾರರಿಗೆ ತಿಳಿಸಿಕೊಡಬೇಕು ಎಂದು ಎಂಟಿಬಿ ಮನವಿ ಮಾಡಿದರು. ಬೂತ್‌ಮಟ್ಟದಿಂದ ಕೇಂದ್ರ ಸರ್ಕಾರದ ಯೋಜನೆಗಳ ಕರಪತ್ರಗಳನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
    ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ: ಬಿಜೆಪಿಯಲ್ಲಿ ಯಾವುದೇ ಒಡಕಿಲ್ಲ, ಯಾವುದೇ ಮುಖಂಡರ ನಡುವೆ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ವರಿಷ್ಟರ ಅಣತಿಯಂತೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವಿಗೆ ಎಲ್ಲರೂ ಶ್ರಮಿಸುತ್ತೇವೆ ಎಂದು ಎಸ್‌ಸಿಎಸ್‌ಟಿ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts