More

    ವಿಜಯೇಂದ್ರಗೆ ಬಿಜೆಪಿ ಸಾರಥ್ಯ ಸ್ವಾಗತಾರ್ಹ

    ಹೊಸಪೇಟೆ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರಗಾಲ ಮತ್ತು ಮುಂಬರುವ ಜಿ.ಪಂ., ತಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿರುವ ಪಕ್ಷದ ವರಿಷ್ಟರ ನಿರ್ಧಾರವನ್ನು ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ ಸ್ವಾಗತಿಸಿದ್ದಾರೆ.

    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನಾ ಕಾರಣಗಳಿಂದ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದರಿAದ ಕೊಂಚ ಮಂಕಾಗಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಂತೆ ಸಂಘಟನಾ ಚತುರರಾಗಿರುವ ಬಿ.ವೈ.ವಿಜಯೇಂದ್ರ ಅವರ ನೇಮಕದಿಂದ ಪಕ್ಷದ ಯುವ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಲಿದೆ. ಜತೆಗೆ ಮುಂಬರುವ ಜಿ.ಪಂ., ತಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲವರ್ದನೆಗೆ ಮತ್ತಷ್ಟು ನೆರವಾಗಲಿದೆ ಎಂದು ತಿಳಿಸಿದರು.

    ಅಲ್ಲದೇ, ರಾಜ್ಯದಲ್ಲಿ ಭೀರಕ ಬರ ಆವರಿಸಿದ್ದು, ನಿರೀಕ್ಷಿತ ಮಟ್ಟದಲ್ಲಿ ಸರ್ಕಾರ ಪರಿಹಾರ ಕಾರ್ಯಗಳನ್ನು ಕೈಗೆತ್ತಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಎಚ್ಚರಿಸುವುದು, ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸಗಳಿಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕ ಪರಿಣಾಮಕಾರಿಯಾಗಲಿದೆ. ಅಲ್ಲದೇ, ಮಾಜಿ ಸಿಎಂ ಯಡಿಯೂರಪ್ಪ ಅವರಂತೆ ವಿಜಯೇಂದ್ರ ಭವಿಷ್ಯದಲ್ಲಿ ಪ್ರಬಲ ನಾಯಕರಾಗಿ ಹೊರ ಹೊಮ್ಮುವ ವಿಶ್ವಾಸವಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವಗೌಡ ಪಾಟೀಲ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts