More

    ಏ.21ರಂದು ಮಹಿಳಾ ಮೋರ್ಚಾ ವಿಭಾಗ ಮಟ್ಟದ ಕಾರ್ಯಾಗಾರ

    ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಮಹಿಳಾ ಕಾರ್ಯದಲ್ಲಿ ತೊಡಗಿಸಿಕೊಳ್ಳು ವಿವಿಧ ಯೋಜನೆಗಳನ್ನು ರೂಪಿಸಿದ್ದು, ಏ.21ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಿವಮೊಗ್ಗ ಮತ್ತು ಮಂಗಳೂರು ವಿಭಾಗ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ತಿಳಿಸಿದರು.

    ಬಿಜೆಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 6 ಜಿಲ್ಲೆಗಳ 33 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 90 ಮಂದಿ ಅಪೇಕ್ಷಿತ ಪದಾಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜ್ಯೋತಿ ಶೇಟ್ ಉದ್ಘಾಟಿಸಲಿದ್ದಾರೆ. ಕಾರ್ಯಕಾರಿಣಿ ಸದಸ್ಯೆ ಅಶ್ವಿನಿ ಎಂ.ಎಲ್. ಉಪಸ್ಥಿತರಿರುವರು ಎಂದರು.

    ಪ್ರವಾಸಿ ವಿಸ್ತಾರಕರ ಆಗಮನ
    ಜಿಲ್ಲೆಯಲ್ಲಿ ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿದ್ದು, ಪಕ್ಷದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಮಹಿಳಾ ಫಲಾನುಭವಿಗಳನ್ನು ಭೇಟಿ ಮಾಡಿ ಸೆಲ್ಫಿ ತೆಗೆದುಕೊಳ್ಳುವುದು ಮುಂತಾದ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲೆಯ ಪದಾಧಿಕಾರಿಗಳ ಜೊತೆಗೆ ದೆಹಲಿ, ಕೇರಳ, ಗೋವಾ ರಾಜ್ಯದಿಂದ 25ಕ್ಕೂ ಅಧಿಕ ಮಂದಿ ಪ್ರವಾಸಿ ವಿಸ್ತಾರಕರಾಗಿ ಮಹಿಳಾ ಕಾರ್ಯಕರ್ತೆಯರು ಆಗಮಿಸಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts