More

    ಪಂಚರತ್ನ ಯಾತ್ರೆಯೊಂದಿಗೆ ಕಣ್ಣೀರ ಕಥೆ: ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ವ್ಯಂಗ್ಯ

    ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮೂಲಕ ಮತ್ತೊಂದು ಕಣ್ಣೀರ ಕಥೆಯನ್ನು ಹೇಳಲು ಹೊರಟಿದ್ದಾರೆ. ಇದನ್ನು ನಂಬುವವರು ಯಾರೂ ಇಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ವ್ಯಂಗ್ಯವಾಡಿದರು.
    ಕಳೆದ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನೇ ಈಡೇರಿಸದ ಕುಮಾರಸ್ವಾಮಿ ಅವರು ಈಗ ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಸಾಲು ಸಾಲು ಭರವಸೆಗಳು ಏನಾದವು. ನಿಮ್ಮ ಮಗನನ್ನು ಮಂಡ್ಯದ ಜನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲಿಲ್ಲ ಎಂಬ ಒಂದೇ ಕಾರಣಕ್ಕೆ ನೀವು ನೀಡಿದ್ದ ಎಲ್ಲ ಭರವಸೆ, ಘೋಷಣೆಗಳೆಲ್ಲವನ್ನೂ ವಾಪಸ್ ಪಡೆದದ್ದು ಮರೆತುಹೋಗಿದೆಯೇ ಎಂದು ಸುದ್ದಿಗೋಷ್ಠಿಯಲ್ಲಿ ಛೇಡಿಸಿದರು.
    ಮುಖಂಡ ಅಶೋಕ್ ಜಯರಾಂ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ಡಿ.22ರಂದು ಎಲ್ಲ ತಾಲೂಕುಗಳಲ್ಲೂ ಜೋಳಿಗೆ ಪ್ರತಿಭಟನೆ ನಡೆಸಲಾಗುವುದು ಎಂದರು.
    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ.ನಾ. ಸುರೇಶ್, ನಗರಾಧ್ಯಕ್ಷ ವಿವೇಕ್, ನಗರಸಭೆ ನಾಮನಿರ್ದೇಶಿತ ಸದಸ್ಯ ಶಿವಕುಮಾರ್, ವಿನೋದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts