

ಮಂಗಳೂರು : ಮಹಿಳೆಯರು ಹಾಗೂ ಯುವಕರು ಬಿಜೆಪಿ ಸದಸ್ಯರಾಗಿ ನೋಂದಣಿಯಾಗುವ ಮೂಲಕ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಬೇಕು. ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33 ಅವಕಾಶವನ್ನು ಕಲ್ಪಿಸುತ್ತಿರುವ ಆಶಯಕ್ಕೆ ಪೂರಕವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರಾಗಿ ಮುಖ್ಯ ವಾಹಿನಿಯಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಳ್ಳಬೇಕೆಂದು ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಸಂಘಟನಾ ಪರ್ವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ ಮಾತನಾಡಿ ಸಂಘಟನೆಯ ವಿವಿಧ ಹಂತಗಳನ್ನು ಬೂತ್ ಮಟ್ಟದಿಂದಲೇಪಾರ್ಟಿಯ ಸಂವಿಧಾನ ಮತ್ತು ಆಶಯದಂತೆ ಗಟ್ಟಿಗೊಳಿಸುವಲ್ಲಿ ಪ್ರಮುಖರು ಕಾರ್ಯ ಪ್ರವೃತ್ತರಾಗಬೇಕು ಎಂದರು.
ಸಂಘಟನಾ ಪರ್ವಕ್ಕೆ ಜಿಲ್ಲೆಯ ಚುನಾವಣಾಧಿಕಾರಿಯಾಗಿ ನಿಯೋಜನೆಗೊಂಡಿರುವ ರಾಜೇಶ್ ಕಾವೇರಿ ಮಾಹಿತಿ ನೀಡಿದರು.
ಸಹ ಚುನಾವಣಾಧಿಕಾರಿ ವಿಕಾಸ್.ಪಿ ಕಾರ್ಯಗಾರ ನಡೆಸಿಕೊಟ್ಟರು.
ಸಹ ಚುನಾವಣಾಧಿಕಾರಿ ಸಾಜ ರಾಧಾಕೃಷ್ಣ ಅಳ್ವ ಸ್ವಾಗತಿಸಿ, ಜಿಲ್ಲಾ ಉಪಾಧ್ಯಕ್ಷ ದೇವಪ್ಪ ಪೂಜಾರಿ ವಂದಿಸಿದರು.
ಜಿಲ್ಲಾ ಪ್ರಧಾನಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.