ಕಾರವಾರ: ಗ್ರಾಮ ಪಂಚಾಯತ್ ಸದಸ್ಯ, ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರದ ಪ್ರಮುಖ ದಿಲೀಪ ಗಜೀನಕರ ಅವರನ್ನು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಅಮಾನವೀಯವಾಗಿ ಹಿಂಸಿಸಿ, ದೌರ್ಜನ್ಯ ನಡೆಸಿರುವ ಪಿಎಸ್ ಐ ಮಹಾಂತೇಶ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ, ಪಕ್ಷದ ಮಂಡಲದ ಅಧ್ಯಕ್ಷರು, ನಗರಸಭೆ ಅಧ್ಯಕ್ಷರು, ಚಿತ್ತಾಕುಲ ಗ್ರಾಪಂ ಸದಸ್ಯರು, ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದ್ದಾರೆ.
ಮಂಗಳವಾರ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ವಿನಾಕಾರಣ ಪಿಎಸ್ಐ ಮಹಾಂತೇಶ್ ಕಿರಿಕಿರಿ ಮಾಡಿದ್ದಾರೆ, ಬಿಜೆಪಿಯ ದಿಲೀಪ ಗಜಿನಕರ ಮೇಲೆ ರೇಗಾಡಿದ್ದಾರೆ. ಬುಧವಾರ ನಸುಕಿನ ಜಾವ ಅವರನ್ನು ಮನೆಯಿಂದ ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದು ದೈಹಿಕ ಹಾಗೂ ಮಾನಸಿಕವಾಗಿ ಹಿಂಸಿಸಿದ್ದಾರೆ. ಈ ದೌರ್ಜನ್ಯದಿಂದ ದಿಲೀಪ ಗಜೀನಕರ ಅವರಿಗೆ ನಡೆಯಲು ಸಾಧ್ಯವಾಗದೆ ವೀಲ್ ಚೇರ್ ನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ದಿಲೀಪ ಅವರನ್ನು ಅಮಾನವೀಯವಾಗಿ ಹಿಂಸಿಸಿದ ಪಿಎಸ್ಐ ಮಹಾಂತೇಶ ಹಾಗೂ ಸಿಬ್ಬಂದಿಗಳು ಹಾಗೂ ಸುಳ್ಳು ವೈದ್ಯಕೀಯ ವರದಿ ನೀಡಿದ ವೈದ್ಯರನ್ನು ಕೂಡಲೇ ಅಮಾನತು ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಮುಂದೆ ಇಂತಹ ಕ್ರಮಕ್ಕೆ ಅವಕಾಶ ಮಾಡಿಕೊಡಬಾರದು ಎಂದು ವಿನಂತಿಸಿದ್ದಾರೆ. ಕ್ರಮ ಕೈಗೊಳ್ಳದೆ ಇದ್ದಲ್ಲಿ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದೂ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಕಾಂಗ್ರೆಸ್ ದಬ್ಬಾಳಿಕೆ, ಗೂಂಡಾಗಿರಿ ವಿರುದ್ಧ ರೂಪಾಲಿ ನಾಯ್ಕ ವಾಗ್ದಾಳಿಃ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಮಾಯಕರ ಮೇಲೆ ದಬ್ಬಾಳಿಕೆ, ದೌರ್ಜನ್ಯ, ಮಹಿಳೆಯರ ಹತ್ಯೆಯಂತಹ ಘಟನೆಗಳು ಹೆಚ್ಚುತ್ತಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಲಾಗುತ್ತಿದೆ. ಆ ಮೂಲಕ ಸಾರ್ವಜನಿಕರ ಬದುಕು ನರಕವಾಗಿದೆ.
ಬಿಜೆಪಿ ಕಾರ್ಯಕರ್ತರಿಗೆ ಚಿತ್ರಹಿಂಸೆ ನೀಡಿ ಕಾರ್ಯಕರ್ತರ ಮನೋಸ್ಥೈರ್ಯವನ್ನು ಹಾಳುಗೆಡವಲು ಯತ್ನಿಸುತ್ತಿರುವ ಪಿಎಸ್ ಐ ಮಹಾಂತೇಶ ವಿರುದ್ಧ ಉನ್ನತ ಅಧಿಕಾರಿಗಳ ಗಮನಕ್ಕೆ ತರುತ್ತೇನೆ. ಈ ಪ್ರಕರಣದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ಅವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಪಂ ಸದಸ್ಯರಿಗೆ ಚಿತ್ರಹಿಂಸೆ ನೀಡಿದ ಪೊಲೀಸರ ಮೇಲೆ ಕ್ರಮಕ್ಕೆ ರೂಪಾಲಿ ನಾಯ್ಕ ಆಗ್ರಹ
You Might Also Like
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…
ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes
ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…