More

    ಬಿಜೆಪಿ ತೊರೆಯುತ್ತಾರಾ ಶಾಸಕ ಅರವಿಂದ ಬೆಲ್ಲದ?; ಇಲ್ಲಿದೆ ಅವರಿಂದಲೇ ಸ್ಪಷ್ಟನೆ

    ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರು ಬಿಜೆಪಿಯನ್ನು ತೊರೆಯುತ್ತಾರೆ ಎಂಬ ವದಂತಿ ಸೋಷಿಯಲ್ ಮೀಡಿಯಾದಲ್ಲಿ ಕಳೆದ ಎರಡು ದಿನಗಳಿಂದ ಹರಿದಾಡುತ್ತಿದ್ದು, ರಾಜಕೀಯ ವಲಯದಲ್ಲೂ ಕುತೂಹಲ ಕೆರಳಿಸಿತ್ತು. ಈ ಸಂಬಂಧವಾಗಿ ಅರವಿಂದ ಬೆಲ್ಲದ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

    ಧಾರವಾಡ ಶಾಸಕ ಅರವಿಂದ ಬೆಲ್ಲದ ಬಿಜೆಪಿ ತೊರೆಯುತ್ತಾರೆಂಬ ವದಂತಿ ವಿಚಾರವಾಗಿ ಅವರೇ ಲಿಖಿತ ಪ್ರತಿಕ್ರಿಯೆಯೊಂದನ್ನು ಪ್ರಕಟಿಸಿದ್ದಾರೆ. ನನ್ನ ವಿಚಾರದಲ್ಲಿ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆದಿದೆ. ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

    ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಆರ್​ಎಸ್​ಎಸ್​ ಸೇರಿ ಪರಿವಾರದ ಕುರಿತ ನನ್ನ ನಿಷ್ಠೆ ಅಚಲವಾಗಿದೆ. ಕಾಯಾ, ವಾಚಾ, ಮನಸಾ ನಾನು ಬಿಜೆಪಿ ತೊರೆಯುವುದನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿಯೂ ಅವರು ಹೇಳಿದ್ದಾರೆ.

    ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್​ ಅಧಿಕಾರಿಗೇ ಕೊಲೆ ಬೆದರಿಕೆ; ಹಣ ಮಂಜೂರು ಮಾಡುವಂತೆ ಧಮ್ಕಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts