More

    ‘ಗೃಹಲಕ್ಷ್ಮಿ’ಗೆ ಚಾಲನೆ ಹಬ್ಬವಾಗಿಸಿದ ಬಿಜೆಪಿ ಶಾಸಕ !

    ಬೆಂಗಳೂರು: ನಾಲ್ಕನೇ ಗ್ಯಾರಂಟಿಯಾಗಿ ‘ಗೃಹಲಕ್ಷ್ಮಿ’ ಯೋಜನೆಗೆ ರಾಜ್ಯ ಸರ್ಕಾರ ಮೈಸೂರಿನಲ್ಲಿ ಅದ್ದೂರಿಯಾಗಿ ಚಾಲನೆ ನೀಡಿದರೆ, ಇತ್ತ ಯಶವಂತಪುರ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಕ್ಷೇತ್ರದ ಹಲವೆಡೆ ಚಾಲನಾ ಕಾರ್ಯಕ್ರಮ ಆಯೋಜಿಸಿ ಸಂಭ್ರಮಿಸಿದರು.

    ಯಶವಂತಪುರ ವಿಧಾನಸಭೆ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಗೆ ಬರುವ ದೊಡ್ಡಬಿದರಕಲ್, ಹೇರೋಹಳ್ಳಿ, ಉಲ್ಲಾಳು, ಕೆಂಗೇರಿ ಹಾಗೂ ಹೆಮ್ಮಿಗೆಪುರ ವಾರ್ಡ್‌ಗಳಲ್ಲಿ ಯೋಜನೆಗೆ ಚಾಲನಾ ಸಮಾರಂಭ ದೊಡ್ಡಮಟ್ಟದಲ್ಲಿ ಆಯೋಜಿಸಿದ್ದರೆ, 17 ಗ್ರಾ.ಪಂ. ಕೇಂದ್ರಗಳಲ್ಲೂ ಕಾರ್ಯಕ್ರಮ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

    ವೇದಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್.ಟಿ.ಸೋಮಶೇಖರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಕಾಂಗ್ರೆಸ್ ಶಾಸಕರೇ ಮಾಡಬೇಕು ಎಂದೇನಿಲ್ಲ ಎಂದು ಸಮರ್ಥಿಸಿಕೊಂಡರು.

    ಕ್ಷೇತ್ರದಲ್ಲಿ 94 ಸಾವಿರ ಬಿಪಿಎಲ್ ಕಾರ್ಡ್ ಹೊಂದಿದವರಿದ್ದು, ಈವರೆಗೆ 24 ಸಾವಿರ ನೋಂದಣಿಯಾಗಿದೆ. ಉಳಿದವರೂ ನೋಂದಣಿ ಮಾಡಿಸಿಕೊಳ್ಳಲಿ ಎಂದು ಸಲಹೆ ನೀಡಿದರು.
    ಹಬ್ಬದ ರೀತಿಯಲ್ಲಿ ಕಾರ್ಯಕ್ರಮ ಮಾಡಿದ್ದು, ಯೋಜನೆ ಲ ಜನರಿಗೆ ತಲುಪಿಸುತ್ತೇವೆ.

    ಗೃಹ ಜ್ಯೋತಿ ಯೋಜನೆಯಡಿ 40 ಸಾವಿರ ನೋಂದಣಿಯಾಗಿತ್ತು. ಈಗ 1.90 ಲಕ್ಷ ಜನರಿಗೆ 13 ಕೋಟಿ ರೂ. ಉಳಿತಾಯವಾಗುತ್ತಿದೆ. ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಯಶಸ್ವಿಗೊಳಿಸಲಾಗುವುದು ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.

    ಬೊಮ್ಮಾಯಿಗೆ ಪರೋಕ್ಷ ತಿರುಗೇಟು

    ನಂತರ ಸುದ್ದಿಗಾರರಿಗೆ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿ, ದೊಡ್ಡ ದೊಡ್ಡವರು ಬೇಕಾದ್ದು ಮಾತನಾಡಲಿ. ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ನ್ಯೂನತೆಗಳಿಲ್ಲ ಎಂದು ಗ್ಯಾರಂಟಿಗಳನ್ನು ಟೀಕಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
    ಸಹಕಾರ ಸಚಿವನಾಗಿ ಮಾಡಿದ್ದ ಕಾರ್ಯಕ್ರಮಗಳನ್ನು ಆಗ ಪ್ರತಿಪಕ್ಷ ಕಾಂಗ್ರೆಸ್ ಶಾಸಕರು ಜನರಿಗೆ ತಲುಪಿಸಿದ್ದರು. ಅದೇ ರೀತಿ ಗೃಹಲಕ್ಷ್ಮಿ ಯೋಜನೆ ಕುರಿತು ಮಾಹಿತಿ ನೀಡುತ್ತಿದ್ದೇನೆ ಎಂದರು.

    ಮೂರ‌್ನಾಲ್ಕು ವರ್ಷಗಳಿಂದ ಚುನಾವಣೆಗಳಾಗಿಲ್ಲ. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಆಡಳಿತ ಪಕ್ಷದ ಕೈಯಲ್ಲಿರುತ್ತದೆ. ಹೀಗಾಗಿ ಕೆಲ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಸಮಜಾಯಿಷಿ ನೀಡಿದರು.

    ಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿ ನೀಡಲೆಂದು ಕಾರ್ಯಕ್ರಮ ಏರ್ಪಡಿಸಿರುವೆ. ಬರುವ ಲೋಕಸಭೆ ಚುನಾವಣೆ ತಯಾರಿಗೆ ಕಾರ್ಯಕ್ರಮ ಆಯೋಜಿಸಿಲ್ಲ ಎಂದು ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts