More

    ಪುತ್ರನಿಗೆ ಚಿತ್ರದುರ್ಗ ಲೋಕಸಭೆ ಟಿಕೆಟ್​ ಮಿಸ್; ಬಿಎಸ್​ವೈ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಶಾಸಕ ಚಂದ್ರಪ್ಪ

    ಚಿತ್ರದುರ್ಗ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಪ್ರಬಲ ಆಕಾಂಕ್ಷಿಗಳು ಬಂಡಾಯ ಏಳುತ್ತಿದ್ದು, ಬಿಜೆಪಿ ಪಾಲಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮುಖ್ಯವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವಯ. ವಿಜಯೇಂದ್ರ ವಿರುದ್ಧ ಬಹುತೇಕ ನಾಯಕರು ಬಂಡಾಯ ಎದ್ದಿದ್ದು, ಇದೀಗ ಚಿತ್ರದುರ್ಗದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.

    ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಮಾಜಿ ಸಚಿವ ಗೋವಿಂದ ಕಾರಜೋಳಗೆ ಟಿಕೆಟ್​ ನೀಡಿದ್ದರಿಂದ ಅಸಮಾಧಾನಗೊಂಡಿರುವ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಹಾಗೂ ಅವರ ಪುತ್ರ ರಘುಚಂದನ್ ಅವರು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಚಂದ್ರಪ್ಪ, ಚಿತ್ರದುರ್ಗ ಕ್ಷೇತ್ರಕ್ಕೆ ಪುತ್ರನೇ ಪ್ರಬಲ ಆಕಾಂಕ್ಷಿಯಾಗಿದ್ದ ಭಾರೀ ಅಂತರದಲ್ಲಿ ಗೆಲ್ಲುವ ವಿಶ್ವಾಸವಿತ್ತು. ಬುಧವಾರ ಮಧ್ಯಾಹ್ನದವರೆಗೂ ನನ್ನ ಮಗನಿಗೆ ಟಿಕೆಟ್ ಸಿಗುತ್ತದೆ ಎಂಬ ಭರವಸೆಯಿತ್ತು, ಆದರೆ ಈ ಹಂತದಲ್ಲಿ ಯಡಿಯೂರಪ್ಪ ಮಧ್ಯಪ್ರವೇಶಿಸಿ ಕಾರಜೋಳ ಅವರಿಗೆ ಟಿಕೆಟ್ ಕೊಡಿಸಿದ್ದಾರೆ.

    BSY BL BYV

    ಇದನ್ನೂ ಓದಿ: ಕ್ರಿಸ್​ ಗೇಲ್​-ಎಬಿಡಿ ಹೆಸರಿನಲ್ಲಿರುವ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್​; ಏನದು?

    ಕಾರಜೋಳಗೆ ಟಿಕೆಟ್​​ ಕೊಡಲಿಲ್ಲ ಅಂದರೆ ನಾನು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ದುಂಬಾಲು ಬಿದ್ದು, ಕಾರಜೋಳ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ಹೀಗಾಗಿ ನಾನು ಯಡಿಯೂರಪ್ಪ ಕುಟುಂಬಕ್ಕೆ ತೋರಿದ ನಿಷ್ಠೆ ಸಾರ್ಥಕವೆನಿಸಿದೆ.

    2019ರ ಲೋಕಸಭೆ ಚುನಾವಣೆ ಸಮಯದಲ್ಲಿ ನನ್ನ ಪುತ್ರನಿಗೆ ಟಿಕೆಟ್​ ಕೊಡುವಂತೆ ಕೇಳಿದ್ದೆ. ಆದರೆ, 2024ರಲ್ಲಿ ಕೊಡುವುದಾಗಿ ಹೇಳಿ ಭರವಸೆ ನೀಡಿದರು. ಇದಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಕೂಡ ರಘುಚಂದನ್ ಅವರಿಗೆ 2024ರಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದರು. ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ರಘು ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಸಮೀಕ್ಷೆಗೆ ಬಂದವರೂ ಹೇಳಿದ್ದಾರೆ. ಸಿಇಸಿ ಸಭೆಯಲ್ಲಿ ನನ್ನ ಮಗನ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಆದರೆ, ನನ್ನ ಮಗನಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಲು ಯಡಿಯೂರಪ್ಪ ಅವರೇ ಕಾರಣ ಎಂದು ಆರೋಪಿಸಿದ್ದಾರೆ.

    ಈ ಹಿಂದೆ ಶಿವರಾಜ್ ತಂಗಡಗಿ, ವೆಂಕಟರಮಣಪ್ಪ, ಗೂಳಿಹಟ್ಟಿ ಡಿ ಶೇಖರ್ ಅವರು ಯಡಿಯೂರಪ್ಪ ಅವರನ್ನು ಬೆಂಬಲಿಸಿ ಸಿಎಂ ಮಾಡಿದ್ದು, ಯಡಿಯೂರಪ್ಪ ಅವರು ಮೂವರನ್ನೂ ವಂಚಿಸಿ ಸಂಪುಟದಿಂದ ಹೊರಹಾಕಿದ್ದರು. ಆದರೆ ನಾನು ಇನ್ನೂ ಯಡಿಯೂರಪ್ಪ ಅವರನ್ನು ಬೆಂಬಲಿಸುತ್ತಲೇ ಇದ್ದೇನೆ. ನನಗೆ, ಮಗನಿಗೆ ಹಾಗೂ ಭೋವಿ ಸಮುದಾಯಕ್ಕೆ ಅನ್ಯಾಯವಾಗಿದೆ. ಬೊಮ್ಮಾಯಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನವನ್ನೂ ನೀಡಿಲ್ಲ. ನಾನು ಪ್ರಧಾನಿ ಮೋದಿಯನ್ನು ಬಲವಾಗಿ ನಂಬುತ್ತೇನೆ, ಆದರೆ ನನ್ನ ಮಗನಿಗೆ ಮತ್ತು ನನಗೆ ಆಗಿರುವ ಅನ್ಯಾಯದ ವಿರುದ್ಧ ನಾನು ಹೋರಾಡುತ್ತೇನೆ ಎಂದು ಅವರು ಹೇಳಿದರು. ಶುಕ್ರವಾರ ಹೊಳಲ್ಕೆರೆಯಲ್ಲಿ ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts