More

    ಮೈಸೂರು ದಸರಾ 2023| ಉರ್ದು ಕವಿಗೋಷ್ಠಿಗೆ ಆಕ್ಷೇಪಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್; ಸರ್ಕಾರದ ವಿರುದ್ಧ ವಾಗ್ದಾಳಿ

    ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಅರಮನೆ ನಗರಿ ಮೈಸೂರು ಸಜ್ಜುಗೊಳ್ಳುತ್ತಿದ್ದು, ದಸರಾ ಪ್ರಯುಕ್ತ ಅಕ್ಟೋಬರ್ 15ರಿಂದ 24ರವರೆಗೆ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಇದರ ನಡುವೆ ನಾಡಹಬ್ಬ ದಸರಾದಲ್ಲಿ ಉರ್ದು ಕವಿಗೋಷ್ಠಿ ಆಯೋಜಿಸಿರುವುದನ್ನು ಮಾಜಿ ಸಚಿವ, ಬಿಜೆಪಿ ಶಾಸಕ ಸುನಿಲ್​ ಕುಮಾರ್​ ಆಕ್ಷೇಪಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ನಾಡಹಬ್ಬ ದಸರಾದಲ್ಲಿ ರಾಜ್ಯ ಸರ್ಕಾರ ಉರ್ದು ಕವಿಗೋಷ್ಠಿ ಆಯೋಜಿಸಿದೆ. ಕನ್ನಡದ ಶ್ರೀಮಂತ ಸಂಸ್ಕ್ರತಿಯ ಪ್ರದರ್ಶನಕ್ಕೆ ವೇದಿಕೆಯಾಗಬೇಕಿದ್ದ ದಸರಾದಲ್ಲಿ ಉರ್ದು ಹೇರಿಕೆ ಏಕೆ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಾಡಹಬ್ಬ ದಸರಾದಲ್ಲಿ ರಾಜ್ಯ ಸರ್ಕಾರ ಉರ್ದು ಕವಿಗೋಷ್ಠಿ ಆಯೋಜಿಸಿದೆ. ಕನ್ನಡದ ಶ್ರೀಮಂತ ಸಂಸ್ಕ್ರತಿಯ ಪ್ರದರ್ಶನಕ್ಕೆ ವೇದಿಕೆಯಾಗಬೇಕಿದ್ದ ದಸರಾದಲ್ಲಿ ಉರ್ದು ಹೇರಿಕೆ ಏಕೆ. ತನ್ನ ಮತ ಬ್ಯಾಂಕ್ ಓಲೈಕೆಗಾಗಿ ಕಾಂಗ್ರೆಸ್ ಕನ್ನಡದ ಮೇಲೆ ಉರ್ದು ಹೇರುತ್ತಿದೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳಲ್ಲಿ ಜಾತಿ ಗಣತಿಗೆ ಕ್ರಮ: ರಾಹುಲ್ ಗಾಂಧಿ

    ಟಿಪ್ಪು ನಿಜಗನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಮಹಿಷ ದಸರಾ, ಉರ್ದು ಕವಿಗೋಷ್ಠಿ ಜತೆಗೆ ಇನ್ನೆಷ್ಟು ಸಾಂಸ್ಕ್ರತಿಕ ದೌರ್ಜನ್ಯಕ್ಕೆ ನಿಮ್ಮ ಸಹಮತ ದಸರಾದಲ್ಲಿ ನಾಡದೇವಿ ಚಾಮುಂಡಿ ಹಾಗೂ ಮೈಸೂರು ಒಡೆಯರ್ ಅವರ ವೈಭವವಾಗಬೇಕೇ ವಿನಾ ಟಿಪ್ಪು ಸಂಸ್ಕ್ರತಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ವಿಚಾರದಲ್ಲಿ ಸೂಕ್ಷ್ಮತೆ ಹಾಗೂ ಜವಾಬ್ದಾರಿಯನ್ನು ಮರೆತಂತೆ ಕಾಣುತ್ತಿದೆ. ವರ್ಷಪೂರ್ತಿ ಕರ್ನಾಟಕ ಸಂಭ್ರಮ ಆಚರಿಸಲು ಹೊರಟವರು ದಸರಾದಲ್ಲಿ ಉರ್ದು ಸಂಭ್ರಮ ನಡೆಸಿದರೆ ಹೇಗೆ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ಮಾಜಿ ಸಚಿವ, ಬಿಜೆಪಿ ಶಾಸಕ ಸುನಿಲ್​ ಕುಮಾರ್ ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts