More

    ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಸರ್ಕಾರದ ಕ್ರಮ ಖಂಡಿಸಿ ಹೈಕೋರ್ಟ್​ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್

    ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನ​ಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

    ಬಿಜೆಪಿ ಶಾಸಕ ಬಸನಗೌಡ ಪಾಟೀಲ​ ಯತ್ನಾಳ ಅವರು ಡಿಕೆ ಶಿವಕುಮಾರ್‌ ವಿಚಾರದಲ್ಲಿ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

    ಅರ್ಜಿಯಲ್ಲೇನಿದೆ

    ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ಸೋತಿದ್ದಕ್ಕೆ ಸಂಭ್ರಮಾಚರಣೆ; ಕಾಶ್ಮೀರದಲ್ಲಿ 7 ವಿದ್ಯಾರ್ಥಿಗಳು ಅರೆಸ್ಟ್

    ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆಗೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆಯಲು ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು.

    ಇತ್ತ ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ್ದರು. ಅಲ್ಲದೇ ಈ ಬಗ್ಗೆ ಕೋರ್ಟ್​ಗೆ ಹೋಗುವುದಾಗಿ ಯತ್ನಾಳ್ ಹೇಳಿದ್ದರು. ಇದೀಗ ಅದರಂತೆ ಹೈಕೋರ್ಟ್​ ಮೆಟ್ಟಿಲೇರುವ ಮೂಲಕ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts