More

    ಗೋಹತ್ಯೆ ಶಾಪದಿಂದ ಇಂದಿರಾ, ಸಂಜಯ್ ಗಾಂಧಿ ಸಾವನ್ನಪ್ಪಿದ್ದಾರೆ : ಅನಂತಕುಮಾರ್ ಹೆಗಡೆ

    -ಬಾಂಬ್ ಬ್ಲಾಸ್ಟ್‍ನಲ್ಲಿ ಸತ್ತಿದ್ದು, ರಾಜೀವ್ ಗಾಂಧಿ ಎನ್ನುವ ಬದಲು ರಾಹುಲ್ ಗಾಂಧಿ ಎಂದ ಅನಂತಕುಮಾರ್​

    ಶಿರಸಿ: ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಕಾಂಗ್ರೆಸ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಸಂಜಯ್ ಗಾಂಧಿ ಅವರಿಗೆ ಗೋಹತ್ಯೆ ಶಾಪವಾಗಿದೆ. ಬಾಂಬ್ ಬ್ಲಾಸ್ಟ್‍ನಲ್ಲಿ ಸತ್ತಿದ್ದು, ರಾಜೀವ್ ಗಾಂಧಿ ಎನ್ನುವ ಬದಲು ಮಾತಿನ ಹಿಡಿತ ತಪ್ಪಿ ರಾಹುಲ್ ಗಾಂಧಿ ಎಂದು ಹೇಳುವ ಮೂಲಕವಾಗಿ ಬಿಜೆಪಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿ ವಿವಾದ ಹುಟ್ಟು ಹಾಕಿದ್ದಾರೆ.

    ಬಾಬರಿ ಮಸೀದಿಯಂತೆ ಭಟ್ಕಳ ಮಸೀದಿ ಧ್ವಂಸ ಗ್ಯಾರಂಟಿ: ಕುಮಟಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೇಕಾದರೇ ಬೆದರಿಕೆ ಅಂತ ಬೇಕಾದರೂ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮದಂತೆ ಮಾಡುವುದು ಗ್ಯಾರಂಟಿಯೇ ಆಗಿದೆ. ಇದು ಹಿಂದೂ ಸಮಾಜದ ತೀರ್ಮಾನ. ಅನಂತಕುಮಾರ ಹೆಗಡೆ ತೀರ್ಮಾನ ಅಲ್ಲ ಎಂದು ಅನಂತಕುಮರ್ ಹೆಗಡೆ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

    ಶಿರಸಿಯ ಸಿಪಿ ಬಜಾರ್ ನಲ್ಲಿರುವ ಮಸೀದಿ, ಅದು ವಿಜಯ ವಿಠ್ಠಲ ದೇವಸ್ಥಾನ, ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಕೂಡು ಮಾರುತಿ ದೇವಸ್ಥಾನ. ಇದೇ ರೀತಿ ದೇಶದ ಹಳ್ಳಿಯ ಮೂಲೆ-ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ಸುಮ್ಮನೆ ಕೂರಲ್ಲ. ಈಗ ರಣಭೈರವ ಎದ್ದಾಗಿದೆ. ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಹಿಂದೂ ಧರ್ಮ ಯಾರ ಋಣವನ್ನು ಇಟ್ಟುಕೊಳ್ಳುವ ಧರ್ಮವಲ್ಲ, ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದಿದ್ದರೇ ಇದು ಹಿಂದೂ ರಕ್ತವೇ ಅಲ್ಲ ಎಂದು ಕಡಿಕಾರಿದ್ದಾರೆ.

    ಗೋಹತ್ಯೆ ನಿಷೇಧಕ್ಕಾಗಿ ನಡೆದ ಮಹತ್ವದ ಆಂದೋಲನದ ಸಂದರ್ಭದಲ್ಲಿ ಪೂಜ್ಯ ಯತಿ ಕರ್ಪಾತ್ರಿ ಮಹಾರಾಜರ ಶಾಪದ ಫಲವಾಗಿ “ಗೋಪಾಷ್ಟಮಿ ದಿನದಂದು ಇಂದಿರಾ ಗಾಂಧಿ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು” ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.
    ಇಂದಿರಾಗಾಂಧಿ ಅಂದಿನ ಪ್ರಧಾನಿಯಾಗಿದ್ದಾಗ ಗೋ ಹತ್ಯೆ ನಿಷೇಧದ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಆಂದೋಲನದಲ್ಲಿ ಹತ್ತಾರು ಸಂತರೂ ಸತ್ತರು, ಗೋಲಿಬಾರ್ ಕೂಡಾ ಆಯಿತು. ಇಂದಿರಾಗಾಂಧಿ ಸಮ್ಮುಖದಲ್ಲಿ ಈ ಹತ್ಯೆ ನಡೆಯಿತು. ಈ ವೇಳೆ ನೂರಾರು ಗೋವುಗಳನ್ನೂ ಗುಂಡಿಟ್ಟು ಕೊಲ್ಲಲಾಯಿತು. ದೊಡ್ಡ ತಪಸ್ವಿ ಕರಪಾತ್ರಿ ಮಹಾರಾಜರು ಇಂದಿರಾಗಾಂಧಿ ಅವರಿಗೆ ಶಾಪ ಕೊಟ್ಟರು, ಗೋಪಾಷ್ಠಮಿ ದಿನದಂದೇ ನಿನ್ನ ಕುಲ ನಾಶವಾಗಲಿದೆ ಎಂದು ಶಾಪ ನೀಡಿದರು. ಅಂತೆಯೇ ಗೋಪಾಷ್ಠಮಿಯಂದೇ ಒಬ್ಬೊಬ್ಬರು ಅಂತ್ಯವಾದರು.

    ವಿಮಾನ ದುರಂತದಲ್ಲಿ ಸಂಜಯ್ ಗಾಂಧಿ ಸತ್ತಿದ್ದು ಗೋಪಾಷ್ಠಮಿಯಂದು, ಇಂದಿರಾಗಾಂಧಿಗೆ ಗುಂಡಿಟ್ಟು ಕೊಂದಿದ್ದು ಗೋಪಾಷ್ಠಮಿಯಂದು. ಬಾಂಬ್ ಬ್ಲಾಸ್ಟ್‍ನಲ್ಲಿ ಸತ್ತಿದ್ದು, ರಾಜೀವ್ ಗಾಂಧಿ ಎನ್ನುವ ಬದಲು ರಾಹುಲ್ ಗಾಂಧಿ ಎಂದ ಅನಂತಕುಮಾರ್​ ಮಾತಿನ ಹಿಡಿತ ತಪ್ಪಿ ಬಾಂಬ್ ಬ್ಲಾಸ್ಟ್‍ನಲ್ಲಿ ರಾಹುಲ್ ಗಾಂಧಿ ಸತ್ತಿದ್ದರು ಎಂದು ಹೇಳಿದ್ದಾರೆ.

    ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಇಂದಿನಿಂದ ಆರಂಭ; ರಾಹುಲ್ ಗಾಂಧಿ ನೇತೃತ್ವದಲ್ಲಿ 67 ದಿನಗಳು, 15 ರಾಜ್ಯಗಳು, 110 ಜಿಲ್ಲೆಗಳಲ್ಲಿ ನಡೆಯಲಿದೆ ಯಾತ್ರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts