More

    ಕರೊನಾದಿಂದ ಬಳಲುತ್ತಿರುವ ಬಿಜೆಪಿ ಸಂಸದ ಅಶೋಕ​ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ

    ಬೆಂಗಳೂರು: ಮಹಾಮಾರಿ ಕರೊನಾ ವೈರಸ್​ ಸೋಂಕಿಗೆ ಒಳಗಾಗಿರುವ ಬಿಜೆಪಿ ಸಂಸದ ಅಶೋಕ​ ಗಸ್ತಿ (55) ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

    ಇದಕ್ಕೂ ಮುನ್ನ ಗಸ್ತಿ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆಂದು ಕೆಲ ವದಂತಿಗಳು ಹರಿದಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿ ಫೇಸ್​ಬುಕ್​ ಮೂಲಕ ಸ್ಪಷ್ಟನೆ ನೀಡಿದ್ದು, ರಾಜ್ಯ ಸಭಾ ಸದಸ್ಯರಾದ ಅಶೋಕ್ ಗಸ್ತಿ ಅವರ ಆರೋಗ್ಯ ಕುರಿತು ಕೆಲವು ವರದಿಗಳು ಪ್ರಸಾರವಾಗುತ್ತಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದ್ದು, ಮರುಜನ್ಮ ಪಡೆದು ಆರೋಗ್ಯವಂತರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದು ಹೇಳಿದೆ.

    ರಾಜ್ಯ ಸಭಾ ಸದಸ್ಯರಾದ ಶ್ರೀ ಅಶೋಕ್ ಗಸ್ತಿ ಅವರ ಆರೋಗ್ಯ ಕುರಿತು ಕೆಲವು ವರದಿಗಳು ಪ್ರಸಾರವಾಗುತ್ತಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ…

    Posted by BJP Karnataka on Thursday, September 17, 2020

    ರಾಯಚೂರು ಮೂಲದ ಅಶೋಕ ಗಸ್ತಿಯವರು ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕರೊನಾ ಸೋಂಕಿನಿಂದಾಗಿ ಕಳೆದ 15 ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಸ್ತಿಯವರ ಪತ್ನಿ ಮತ್ತು ಇಬ್ಬರು ಪುತ್ರಿಯರಿಗೂ ಕರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

    ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ ವಿದ್ಯಾರ್ಥಿ ಮುಖಂಡರಾಗಿದ್ದ‌ ಗಸ್ತಿ, 1989ರಲ್ಲಿ ಯುವ ಮೋರ್ಚಾದ ರಾಯಚೂರು ಜಿಲ್ಲಾಧ್ಯಕ್ಷರಾಗಿದ್ದರು. ಜೂನ್ 19ರಂದು ರಾಜ್ಯಸಭೆ ಸದಸ್ಯರಾಗಿ ಅಶೋಕ ಗಸ್ತಿ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಹಾಗೂ ಈರಣ್ಣ ಕಡಾಡಿ ಜತೆ ಅಶೋಕ ಗಸ್ತಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

    ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಪುಣ್ಯ ಸ್ಮರಣೆ: ಹಲವು ಕೃತಿ ಬಿಡುಗಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts