More

  ಉತ್ತರಪ್ರದೇಶ: ಹೃದಯಾಘಾತದಿಂದ ಬಿಜೆಪಿ ಟಿಕೆಟ್‌ ವಂಚಿತ ಸಾವು!

  ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ರಾಜವೀರ್ ದಿಲೇರ್ ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.

  ಇದನ್ನೂ ಓದಿ: ಕನೌಜ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ!

  ವರದಿಗಳ ಪ್ರಕಾರ, ರಾಜವೀರ್ ದಿಲೇರ್ ಅವರು ಅಲಿಘರ್‌ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದು, ತಕ್ಷಣ ಸಂಬಂಧಿಕರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
  2019ರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದ ದಿಲೇರ್ ಅವರನ್ನು 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕಣಕ್ಕಿಳಿಸಿರಲಿಲ್ಲ.

  2017 ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ ಇಗ್ಲಾಸ್‌ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು.
  ಬಿಜೆಪಿ ಸಂಸದರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

  ಹತ್ರಾಸ್ ಲೋಕಸಭಾ ಕ್ಷೇತ್ರದ ಸಂಸದ ರಾಜವೀರ್ ಸಿಂಗ್ ದಿಲೇರ್ ಜಿ ಅವರ ಅಕಾಲಿಕ ನಿಧನವು ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಭಗವಂತ ಶ್ರೀರಾಮನಲ್ಲಿ ಪ್ರಾರ್ಥನೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ತಮ್ಮ ಎಕ್ಸ್‌ ನಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts