More

    ಬಿಜೆಪಿಗೆ ಶಾಕ್.. ಕಾಂಗ್ರೆಸ್ ಪಕ್ಷಕ್ಕೆ ಹಾಲಿ ಸಂಸದ!

    ಜೈಪುರ: ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ರಾಜಸ್ಥಾನದ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

    ಇದನ್ನೂ ಓದಿ: ‘ಚುನಾವಣಾ ಆಯುಕ್ತರನ್ನು ಸರ್ಕಾರ ನೇಮಿಸುವುದಕ್ಕೆ ತಡೆ ನೀಡಿ’ : ಸುಪ್ರೀಂ ಕೋರ್ಟ್‌ನಲ್ಲಿ ಮನವಿ

    ಚುರು ಲೋಕಸಭಾ ಕ್ಷೇತ್ರದಿಂದ ರಾಹುಲ್ ಕಸ್ವಾನ್ ಸತತ ಎರಡು ಬಾರಿ ಗೆಲುವು ಸಾಧಿಸಿದ್ದರು. ಆದರೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದೆ. ಇದರೊಂದಿಗೆ ರಾಹುಲ್ ಕಸ್ವಾನ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

    ಸೋಮವಾರ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

    ಜಾವೆಲಿನ್ ಎಸೆತಗಾರ ದೇವೇಂದ್ರ ಈ ಬಾರಿ ಬಿಜೆಪಿ ಪರವಾಗಿ ಚುರು ಲೋಕಸಭೆಯಿಂದ ಸ್ಪರ್ಧಿಸಲಿದ್ದಾರೆ. ದೇವೇಂದ್ರ ಕೂಡ ಸ್ಥಳೀಯರೇ ಆಗಿದ್ದರಿಂದ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ. ದೇವೇಂದ್ರ ಅವರು ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗೆದ್ದಿದ್ದಾರೆ.

    ಇದರೊಂದಿಗೆ ರಾಹುಲ್ ಕಸ್ವಾನ್ ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್​ ಟಿಕೆಟ್ ಖಚಿತವಾದ ಕಾರಣ ಆ ಪಕ್ಷ ಸೇರುತ್ತಿದ್ದಾರೆ ಎಂದು ಗೊತ್ತಾಗಿದೆ.

    ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಸ್ವಾನ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ 39 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ಸೋಮವಾರ ಸಂಜೆ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಕಸ್ವಾನ್ ಅವರ ಹೆಸರು ಇರುವ ಸಾಧ್ಯತೆ ಇದೆ.

    ಶುಗರ್​ಗೆ ಇನ್ನು ಗುಡ್​ಬೈ:ಸಿಎಂ ಪೋಟೋದೊಂದಿಗೆ ​ಫೇಕ್ ವೀಡಿಯೋ ವೈರಲ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts