More

    ‘ಸ್ವಚ್ಛತೀರ್ಥ ಅಭಿಯಾನ’ ಶಿವ ದೇವಾಲಯವನ್ನು ಸ್ವಚ್ಛಗೊಳಿಸಿದ ಗೌತಮ್ ಗಂಭೀರ್

    ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಬುಧವಾರ ಕರೋಲ್ ಬಾಗ್‌ನಲ್ಲಿರುವ ಶಿವ ಮಂದಿರದ ಆವರಣವನ್ನು ಸ್ವಚ್ಛತಾ ಅಭಿಯಾನದ ಅಂಗವಾಗಿ ಸ್ವಚ್ಛಗೊಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.

    ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭವನ್ನು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರ ಕೈಯಿಂದ ಅನಾವರಣಗೊಳ್ಳಲಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ದಿನದಂದು ದೇಶದ ಎಲ್ಲಾ ದೇವಾಲಯಗಳು ಸಿದ್ಧತೆ ನಡೆಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

    ಪ್ರಧಾನಮಂತ್ರಿಯವರ ಕರೆ ಸ್ವೀಕರಿಸಿದ ನಂತರ ಅನೇಕ ಜನರು ಈಗಾಗಲೇ ತಮ್ಮ ತಮ್ಮ ಪ್ರದೇಶಗಳಲ್ಲಿನ ದೇವಾಲಯಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಬಳಿಕ ಇವುಗಳ ಫೋಟೊ, ವೀಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಭಕ್ತಿ ವ್ಯಕ್ತಪಡಿಸುತ್ತಾರೆ. ಈ ಕಾರ್ಯಕ್ರಮದಲ್ಲಿ ಅನೇಕ ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ಪ್ರಮುಖರು ಭಾಗಿಯಾಗಲಿದ್ದಾರೆ. ದೇವಸ್ಥಾನಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

    ಇತ್ತೀಚೆಗೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಕೂಡ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಕರೋಲ್‌ಬಾಗ್‌ನಲ್ಲಿರುವ ಶಿವ ದೇವಾಲಯಕ್ಕೆ ಭೇಟಿ ನೀಡಿದ ಅವರು ದೇವಾಲಯವನ್ನು ಸ್ವತಃ ಸ್ವಚ್ಛಗೊಳಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಟಾರ್ ಕ್ರಿಕೆಟಿಗ ಮತ್ತು ಸಂಸದರಾಗಿದ್ದರೂ ತಮ್ಮ ಸರಳತೆಯನ್ನು ತೋರಿಸಿರುವ ಗಂಭೀರ್ ಅವರನ್ನು ಅಭಿಮಾನಿಗಳು ಮತ್ತು ನೆಟಿಜನ್‌ಗಳು ಹೊಗಳುತ್ತಿದ್ದಾರೆ.

    ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ದೇವಾಲಯಗಳನ್ನು ಸ್ವಚ್ಛಗೊಳಿಸಿದ ನಂತರ ಪ್ರತಿ ಮನೆಯಲ್ಲೂ ದೀಪಗಳನ್ನು ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಸೆಲೆಬ್ರಿಟಿಗಳು ಸ್ವಚ್ಛ ಅಭಿಯಾನದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ‘ಸ್ವಚ್ಛತೀರ್ಥ ಅಭಿಯಾನ’: ದೇಗುಲದ ಆವರಣ ಸ್ವಚ್ಛಗೊಳಿಸಿದ ನಟ ಜಗ್ಗೇಶ್

    ಅವಿನಾಶ್​ ಹಾಗೂ ಮಾಳವಿಕಾ ಮಧ್ಯೆ ಇದೆ ಅಧಿಕೃತವಾದ ಒಂದು ಒಪ್ಪಂದ..

    ಅಕ್ಕ- ತಂಗಿ ಇಬ್ಬರು ಪ್ರೆಗ್ನೆಂಟ್​; ನಟಿ ಮನೆಯಲ್ಲಿ ಡಬಲ್ ಸಂಭ್ರಮ​

    ಪತ್ನಿ-ಮಗುವಿನ ಕಣ್ಣೇದುರಿಗೆ ನರಳಾಡಿ ಪ್ರಾಣಬಿಟ್ಟ ಪತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts