ಸಚಿವ ಸ್ಥಾನದ ಬಗ್ಗೆ ಆಸಕ್ತಿ ಇಲ್ಲ ಎಂದ ಬಿಜೆಪಿ ಎಂಪಿ!

suresh
Published on

ತಿರುವನಂತಪುರಂ: ಕೇಂದ್ರ ಸಚಿವನಾಗಿ ಮುಂದುವರಿಯುವ ಆಸಕ್ತಿಯಿಲ್ಲ, ಸಂಸದನಾಗಿಯೇ ಮುಂದುವರಿಯುತ್ತೇನೆ ಎಂದು ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಟ್ಟಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಸಚಿವ ಸ್ಥಾನಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇರಳದ ತ್ರಿಶೂರ್ ನಿಂದ 74,686 ಭಾರಿ ಬಹುಮತದೊಂದಿಗೆ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಕೇಂದ್ರ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದು ಗೊತ್ತೇ ಇದೆ. ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದೇನೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಸಂಸದನಾಗಿ ಉತ್ತಮ ಸಾಧನೆ ಮಾಡುತ್ತೇನೆ. ಈ ವಿಷಯ ತ್ರಿಶೂರ್ ಜನರಿಗೂ ಚೆನ್ನಾಗಿ ಗೊತ್ತಿದೆ. ಚಿತ್ರರಂಗದಲ್ಲಿ ಮುಂದುವರಿಯಲು ಸಚಿವ ಸ್ಥಾನದಿಂದ ಕೆಳಗಿಳಿಯುವ ಚಿಂತನೆಯೂ ಇದೆ ಎಂದರು.

ಈ ನಡುವೆ ಕೇರಳದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಸುರೇಶ್ ಗೋಪಿ ಅವರಿಗೆ ಸಹಾಯಕ ಸಚಿವ ಸ್ಥಾನ ನೀಡಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಮಾಹಿತಿ ವಿಶ್ವಸನೀಯ ಮೂಲಗಳಿಂದ ಲಭ್ಯವಾಗಿದೆ. ಇದನ್ನು ಈ ಸಂದರ್ಭದಲ್ಲಿ ಹೇಳಲಾಗಿದೆ ಎಂದು ತೋರುತ್ತದೆ.

ಕೇಂದ್ರ ಸಚಿವ ಸ್ಥಾನದಿಂದ ಮುಕ್ತಿ ಸಿಗಲಿದೆ ಎಂದು ಭಾವಿಸಿರುವ ಸುರೇಶ್ ಗೋಪಿ, ಬಾಕಿ ಉಳಿದಿರುವ ಚಿತ್ರಗಳನ್ನು ಪೂರ್ಣಗೊಳಿಸಬೇಕು. ಈ ಬಗ್ಗೆ ಕೇಂದ್ರ ನಾಯಕತ್ವ ತೀರ್ಮಾನ ತೆಗೆದುಕೊಳ್ಳುತ್ತದೆ. ಸಂಸದನಾಗಿ ತ್ರಿಶೂರ್‌ನಲ್ಲಿ ಉತ್ತಮ ಸೇವೆ ನೀಡಬಲ್ಲೆ. ನನಗೆ ಕ್ಯಾಬಿನೆಟ್ ಮಂತ್ರಿಗಿರಿ ಅಗತ್ಯವಿಲ್ಲ ಎಂದಿದ್ದಾರೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಗೆ ಬರುವಂತೆ ಅವರನ್ನು ಕರೆದಾಗ, ಬಿಜೆಪಿ ನಾಯಕತ್ವದೊಂದಿಗಿನ ತಮ್ಮ ಸಿನಿಮಾಗಳ ಬಗ್ಗೆ ಸುರೇಶ್ ಗೋಪಿ ಹೇಳಿದ್ದಾರಂತೆ. ಸದ್ಯ ನಾಲ್ಕು ಚಿತ್ರಗಳಲ್ಲಿ ನಟಿಸಲು ಕಮಿಟ್ ಆಗಿದ್ದಾರೆ. ಪದ್ಮನಾಭಸ್ವಾಮಿ ದೇವಸ್ಥಾನದ ಐತಿಹಾಸಿಕ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಅವರು ಒಪ್ಪಿಕೊಂಡ ಚಿತ್ರಗಳು ಮಧ್ಯದಲ್ಲಿ ನಿಂತರೆ ನಿರ್ಮಾಪಕರಿಗೆ ಭಾರಿ ನಷ್ಟವಾಗುತ್ತದೆ. ಚಿತ್ರರಂಗದ ಸಿಬ್ಬಂದಿ ಬಿಕ್ಕಟ್ಟಿಗೆ ಸಿಲುಕುವ ಸಾಧ್ಯತೆಗಳಿವೆ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿರುವುದಾಗಿ ಸುರೇಶ್ ಗೋಪಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net