More

    ಚಾಮರಾಜನಗರದಲ್ಲಿ ಕಾಂಗ್ರೆಸ್​ ಪರ ಉತ್ತಮ ವಾತಾವರಣವಿದೆ: ಬಿಜೆಪಿ ಸಂಸದ ಶ್ರೀನಿವಾಸ್​ ಪ್ರಸಾದ್

    ಮೈಸೂರು: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಇನ್ನೂ ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಿರಿಯ ನಾಯಕರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸುವುದು ಸಹಜ. ಅದರಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಚಾಮರಾಜನಗರದ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್ ​ಪ್ರಸಾದ್​ ಅವರ ಮನೆಗೆ ಭೇಟಿ ಮಾತುಕತೆ ನಡೆಸಿದ್ದಾರೆ.

    ಮೈಸೂರಿನಲ್ಲಿರುವ ಜಯಲಕ್ಷ್ಮಿಪುರಂನಲ್ಲಿರುವ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಬಿಜೆಪಿಯಲ್ಲಿ ತಲ್ಲಣವನ್ನುಂಟು ಮಾಡಿದೆ. ಈ ಇಬ್ಬರು ನಾಯಕರು ಭೇಟಿ ವೇಳೆ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದ್ದರಾದರೂ ಸಿಎಂ ಸಿದ್ದರಾಮಯ್ಯ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಭಗವದ್ಗೀತೆ ಕೊಟ್ಟು ಮನೆಯ ಗೃಹಪ್ರವೇಶಕ್ಕೆ ವಿಭಿನ್ನವಾಗಿ ಆಹ್ವಾನಿಸಿದ ನಟ ಕೃಷ್ಣ ಅಜಯ್​ ರಾವ್​

    ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಶ್ರೀನಿವಾಸ್​ ಪ್ರಸಾದ್​, ಏಪ್ರಿಲ್​ 14ರಂದು ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ, ಬರುವುದೂ‌ ಇಲ್ಲ. ಕರೆದಿಲ್ಲ, ಕರೆಯುವುದೂ ಇಲ್ಲ. ನಾನು ಹೋಗುವುದೂ ಇಲ್ಲ ಎಂದು ಹೇಳಿದ್ದಾರೆ.

    ಸಿದ್ದರಾಮಯ್ಯ ಜೊತೆ ರಾಜಕೀಯದ ಚರ್ಚೆ ನಡೆದಿಲ್ಲ. ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದ್ದೆ. ಅವರು ನನ್ನ ಬೆಂಬಲ ಕೇಳಿದ್ದಾರೆ. ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನಷ್ಟೇ. ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ ಎಂದು ಹೇಳುವ ಮೂಲಕ ಸಂಸದ ಶ್ರೀನಿವಾಸ್​ ಪ್ರಸಾದ್ ಬಿಜೆಪಿಯಲ್ಲಿ​ ತಲ್ಲಣವನ್ನು ಉಂಟು ಮಾಡಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts