More

    ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ನಿಧನ! ರಾಜಕೀಯ ಗಣ್ಯರಿಂದ ಸಂತಾಪ

    ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ನಾಯಕ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್ ಅವರು ಇಂದು ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

    ಇದನ್ನೂ ಓದಿ: ಸಿಇಟಿ 50 ಪ್ರಶ್ನೆ ಕೊಕ್; ಮರು ಪರೀಕ್ಷೆ ಇಲ್ಲ, ಮೇ ಅಂತ್ಯಕ್ಕೆ ರಿಸಲ್ಟ್!

    ವಯೋಸಹಜ ಖಾಯಿಲೆಯಿಂದ ಬಳಲುತ್ತಿದ ಶ್ರೀನಿವಾಸ್ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಡರಾತ್ರಿ ಚಿಕಿತ್ಸೆ ಫಲಿಸದೆ, ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ರಾಜಕೀಯ ವಲಯದಲ್ಲಿ ಹೆಚ್ಚಿನ ಮನ್ನಣೆ, ಜನಪ್ರಿಯತೆ ಗಳಿಸಿದ್ದ ರಾಜಕಾರಣಿಗೆ ಇದೀಗ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

    “ಹಿರಿಯ ನಾಯಕರು ಹಾಗೂ ಸಂಸದರಾದ ಸನ್ಮಾನ್ಯ ಶ್ರೀ ವಿ. ಶ್ರೀನಿವಾಸ್ ಪ್ರಸಾದ್ ರವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ” – ಪ್ರತಾಪ್ ಸಿಂಹ

    “ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಆಪ್ತರೂ ಆಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡಿದ ದಿನಗಳು ಇನ್ನೂ ನೆನಪಿನಲ್ಲಿವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ‌ ಶಾಂತಿ” – ಡಿ.ಕೆ. ಶಿವಕುಮಾರ್

    “ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು. ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂಶಾಂತಿ” – ವಿಜಯೇಂದ್ರ ಯಡಿಯೂರಪ್ಪ.

    ಇದನ್ನೂ ಓದಿ: ಇನ್ನೇನು ತಾಳಿ ಕಟ್ಟಬೇಕು ಅಷ್ಟರೊಳಗೆ ಅವನು ಬೇಡ ಎಂದಳು ವಧು! ಆಕೆ ಕೊಟ್ಟ ಕಾರಣ ಕೇಳಿ ವರ ಕಂಗಾಲು

    ಶ್ರೀನಿವಾಸ್​ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ಮೈಸೂರಿನ ಜಯಲಕ್ಷ್ಮೀ ಪುರಂ ನಿವಾಸಕ್ಕೆ ತೆಗೆದುಕೊಂಡು ಹೊರಟ್ಟಿದ್ದು, ಅಂತಿಮ ವಿಧಿವಿಧಾನಗಳನ್ನು ಅಲ್ಲಿಯೇ ಈಡೇರಿಸುವುದಾಗಿ ತಿಳಿಸಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್​? ಫ್ಯಾನ್ಸ್​ ಕಿಡಿ

    ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts