More

    ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್ ಸಂತೋಷ್; ಸಿದ್ದರಾಮಯ್ಯ ಸೋಲಿಸಲು ಕಾರ್ಯತಂತ್ರ!

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಪ್ರಸ್ತುತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

    ಬಿ.ಎಲ್.ಸಂತೋಶ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಯಡಿಯೂರಪ್ಪ ಅವರ ಸಹಕಾರ ಕೋರಿದ್ದಾರೆ. ಟಿಕೆಟ್ ಸಿಕ್ಕಿಲ್ಲವೆಂದು ಬಂಡಾಯ ಎದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸಲು ತಂತ್ರಗಾರಿಕೆಯ ಬಗ್ಗೆ ಬಿಎಸ್​​ವೈ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ನಾಮಪತ್ರ ಹಿಂಪಡೆದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ; ಬಿಜೆಪಿ ಅಭ್ಯರ್ಥಿ ನಿರಾಳ!

    ಸಿದ್ದರಾಮಯ್ಯ ಸೋಲಿಸಲು ಕಾರ್ಯತಂತ್ರ

    ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡುತ್ತಾ, ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಿ, ವಿ,ಸೋಮಣ್ಣ ಅವರನ್ನು ಗೆಲ್ಲಿಸುವ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಅಲ್ಲದೆ ಕೆಲವು ಪ್ರಮುಖ ಕ್ಷೇತ್ರಗಳ ನೇತೃತ್ವ ವಹಿಸಲು‌ ಯಡಿಯೂರಪ್ಪ ಅವರಿಗೆ ಬಿಎಸ್​​ವೈ ಮನವಿ ಮಾಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ, ಬಿ.ಎಲ್.ಸಂತೋಷ್ ವರುಣ ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರು ಚುನಾವಣೆಗೆ ನಿಲ್ಲಬೇಕಿತ್ತು ಎಂದು ಹೇಳಿದ್ದರು. ಈ ಮಾತುಗಳನ್ನು ಸವಾಲಾಗಿ ತೆಗೆದುಕೊಂಡಿರುವ ಸಂತೋಷ್, ಸಿದ್ದರಾಮಯ್ಯ ಅವರನ್ನು ಸೋಲಿಸಲು ಪಣ ತೊಟ್ಟಿದ್ದು, ಬಿಎಸ್​​ವೈ ಬೆಂಬಲ ಕೋರಿದ್ದಾರೆ.

    ಇದನ್ನೂ ಓದಿ: ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಇಲ್ಲ ಅಂತ ಯಾರು ಹೇಳ್ತಾರೆ? ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಲಕ್ಷ್ಮಣ ಸವದಿ

    ಜನರ ಬೆಂಬಲ ಬಿಜೆಪಿ ಪರ!

    ಬಿ.ಎಲ್ ಸಂತೋಷ್ ಭೇಟಿ ವಿಚಾರವಾಗಿ ಬಿಎಸ್​​ವೈ ಮಾತನಾಡುತ್ತಾ, ರಾಜಕೀಯ ಸ್ಥಿತಿಗತಿಗಳು ಹೇಗಿವೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದೇವೆ. ಹಿರಿಯರಾಗಿ ಅಗತ್ಯ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಇಂದಿನಿಂದ ಚುನಾವಣೆ ಮುಗಿಯುವವರೆಗೆ ನನ್ನ ಪ್ರಚಾರ ನಡೆಯಲಿದೆ. ಎಲ್ಲೆಡೆ ವಾತಾವಾರಣ ನಿರೀಕ್ಷೆ ಮೀರಿ ನಮ್ಮ‌ಪರವಿದ್ದು, ಮೋದಿ, ಅಮಿತ್ ಶಾ ಬಂದು ಹೋದ ಮೇಲೆ ಮತ್ತಷ್ಟು ಅನುಕೂಲ ಆಗಿದೆ. ಯಾರ ಬೆಂಬಲವೂ ಇಲ್ಲದೆ ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದು ಬಿಎಸ್​ವೈ ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts