More

    ಪಶ್ಚಿಮ ಬಂಗಾಳದಲ್ಲಿ ಕಿಡಿಗೇಡಿಗಳಿಂದ ದಾಳಿಯ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಎದುರಾಯ್ತು ಮತ್ತೊಂದು ಸಮಸ್ಯೆ!

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಪ್ರವಾಸ ತೆರಳಿದ್ದಾಗ, ಅವರ ಬೆಂಗಾವಲು ಪಡೆಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವ ವಿಚಾರ ನಿಮಗೆಲ್ಲರಿಗೂ ಗೊತ್ತಿದೆ. ಒಂದು ದಾಳಿಯಿಂದ ಸುಧಾರಿಸಿಕೊಳ್ಳುತ್ತಿರುವ ನಡ್ಡಾ ಅವರಿಗೆ ಇದೀಗ ಮತ್ತೊಂದು ಸಮಸ್ಯೆ ಎದುರಾಗಿದೆ.

    ಇದನ್ನೂ ಓದಿ: ‘ಸಂಜನಾಗೆ ಬಲವಂತವಾಗಿ ಮತಾಂತರ ಮಾಡಿಸಲಾಗಿತ್ತು!’ ದಾಖಲಾಯ್ತು ಹೊಸ ದೂರು

    ನಡ್ಡಾ ಅವರಿಗೆ ಕರೊನಾ ಸೋಂಕು ದೃಢವಾಗಿದೆ. ಈ ಕುರಿತಾಗಿ ಟ್ವಿಟ್ಟರ್​ನಲ್ಲಿ ಅವರು ಮಾಹಿತಿ ನೀಡಿದ್ದಾರೆ. ‘ನನಗೆ ಕರೊನಾ ಸೋಂಕಿನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಸೋಂಕಿರುವುದು ವರದಿಯಲ್ಲಿ ದೃಢವಾಗಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಧರ್ಮಪುರಿಯಲ್ಲಿ ಭೀಕರ ಅಪಘಾತ; ಎಂಟುಕ್ಕೂ ಹೆಚ್ಚು ವಾಹನ ನುಜ್ಜುಗುಜ್ಜು, ನಾಲ್ವರು ಬಲಿ

    ಇತ್ತೀಚೆಗೆ ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಎರಡು ದಿನದ ಪ್ರವಾಸದ ಮೇಲೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಡೈಮಂಡ್​ ಹಾರ್ಬರ್​ ಪ್ರದೇಶಕ್ಕೆ ತೆರಳುತ್ತಿದ್ದಾಗ ಅವರ ಬೆಂಗಾವಲು ಪಡೆಯ ಮೇಲೆ ಕಿಡಿಗೇಡಿಗಳು ದಾಳಿ ಇಟ್ಟಿಗೆ ಮತ್ತು ಕಲ್ಲಿನಿಂದ ದಾಳಿ ನಡೆಸಿದ್ದಾರೆ. ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಸೇರಿದಂತೆ ಪಕ್ಷದ ಹಲವು ನಾಯಕರ ಮೇಲೆ ಇದೆ ರೀತಿಯ ದಾಳಿ ನಡೆದಿದೆ. ಇದು ಆಡಳಿತದಲ್ಲಿರುವ ಟಿಎಂಸಿ ಪಕ್ಷದ ಗೂಂಡಾಗಳು ಕೆಲಸ ಎಂದು ಬಿಜೆಪಿ ಆರೋಪಿಸಿದೆ. (ಏಜೆನ್ಸೀಸ್)

    ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ

    ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts