More

    ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ: ನಡ್ಡಾ ಅಧಿಕಾರಾವಧಿ ವಿಸ್ತರಣೆ

    ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಅವರು ಈ ವರ್ಷದ ಜೂನ್ ವರೆಗೆ ಪಕ್ಷದ ಅಧ್ಯಕ್ಷರಾಗಿರುತ್ತಾರೆ. ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

    ಇದನ್ನೂ ಓದಿ: ದಟ್ಟ ಕಾನನದಲ್ಲಿ ವನ್ಯಜೀವಿಗಳ ದಾಹ ನೀಗಿಸುತ್ತಿವೆ ಪುಟ್ಟ ತೊಟ್ಟಿಗಳು..! ಹೃದಯಸ್ಪರ್ಶಿ ವಿಡಿಯೋ ವೈರಲ್..

    ನಡ್ಡಾ ಅವರ ನಾಯಕತ್ವದಲ್ಲಿ ಪಕ್ಷವು ಹಲವು ರಾಜ್ಯಗಳಲ್ಲಿ ಯಶಸ್ಸನ್ನು ಸಾಧಿಸಿದೆ. ಈ ಯಶಸ್ಸನ್ನು ಮುಂದುವರಿಸುವ ಮೂಲಕ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಹೇಳಿದ್ದರು. ಈ ನಿರ್ಧಾರವನ್ನು ಭಾನುವಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಂಗೀಕರಿಸಸಲಾಗಿದೆ.

    ಪಕ್ಷದ ಸಂಸದೀಯ ಮಂಡಳಿಯ ಅನುಮೋದನೆಯೊಂದಿಗೆ ವೈಯಕ್ತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ನಡ್ಡಾ ಅವರಿಗೆ ನೀಡಲಾಗಿದೆ ಎಂದು ಬಿಜೆಪಿ ಹೇಳಿದೆ. 2019ರವರೆಗೆ ಅಮಿತ್ ಶಾ ಪಕ್ಷದ ಅಧ್ಯಕ್ಷರಾಗಿದ್ದರು. ಆ ನಂತರ ನಡ್ಡಾ ಪಕ್ಷದ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಂಡರು.

    ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿಯ ಪ್ರಮುಖರ ಜೊತೆಗೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ. 2019ರ ಚುನಾವಣೆಯಲ್ಲಿ ಪಕ್ಷ ಕಳೆದುಕೊಂಡ 161 ಸ್ಥಾನಗಳ ಮೇಲೆ ಈ ಬಾರಿ ಕೇಂದ್ರೀಕೃತವಾಗಿದೆ. ಈ ಪೈಕಿ 67 ಸ್ಥಾನ ಗೆಲ್ಲುವ ಗುರಿಯನ್ನು ಪ್ರಧಾನಿ ಮೋದಿ ಹಾಕಿಕೊಂಡಿದ್ದಾರೆ ಎಂದು ಕಾರ್ಯಕರ್ತರಿಗೆ ತಿಳಿಸಿದರು. ಈ ಬಾರಿ ಬಿಜೆಪಿ 370 ಮತ್ತು ಎನ್‌ಡಿಎ ಮೈತ್ರಿ ಕೂಟ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಜೆ.ಪಿ. ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಕವಿತೆ ಮೂಲಕ ಸತೀಮಣಿಗೆ ಶುಭ ಕೋರಿದ ಚಿರಂಜೀವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts