ವಿದ್ಯಾರ್ಥಿ ವೇತನ ಬಿಡುಗಡೆಗೆ ದ.ಕ.ಜಿಲ್ಲಾ ಓಬಿಸಿ ಮೋರ್ಚಾ ಆಗ್ರಹ

448971178_7821837027911872_3336255049569819459_n
Published on



ಮಂಗಳೂರು : ದ.ಕ.ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗ ಮೋರ್ಚಾದ ವಿಶೇಷ ಸಭೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ
ಜಿಲ್ಲಾ ಓಬಿಸಿ ಮೋರ್ಚಾದ ಅಧ್ಯಕ್ಷ ಮಹೇಶ್ ಜೋಗಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಬಿಡುಗಡೆ ಮಾಡಬೇಕಾಗಿದ್ದ ವಿದ್ಯಾರ್ಥಿ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಒತ್ತಾಯಿಸಿದರು. ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಬಡ ವಿದ್ಯಾರ್ಥಿಗಳು ಪಠ್ಯ ಪುಸ್ತಕ, ಇನ್ನಿತ್ತರ ವಸ್ತುಗಳನ್ನು ಪಡೆದುಕೊಳ್ಳಲು ಕೂಡ ತೊಂದರೆಯಾಗಿದೆ ಎಂದು ಅವರು ತಿಳಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ರಾಜ್ಯ ಓಬಿಸಿ ಮೋರ್ಚಾದ
ಉಪಾಧ್ಯಕ್ಷ ವಿಠಲ ಪೂಜಾರಿ ಐರೋಡಿ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಆರ್.ಸಿ.ನಾರಾಯಣ ರೆಂಜ,
ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ ಉಪಸ್ಥಿತರಿದ್ದರು. ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಸ್ವಾಗತಿಸಿ, ಶಶಿಧರ್ ಕಲ್ಮಂಜ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಪಲ್ಲಿಪಾಡಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net