More

  ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಗೆ ನಾಳೆಯಿಂದ ನಮೋ ಕಪ್ ಸೌಹಾರ್ದ ಕ್ರಿಕೆಟ್

  ಚಿತ್ರದುರ್ಗ: ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಶುಕ್ರವಾರದಿಂದ 3 ದಿನಗಳ ಕಾಲ (ಮೇ 6, 7, 8) ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ನಮೋ ಕಪ್ ಸೌಹಾರ್ದಯುತ ಹೊನಲು-ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

  ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಪದಾಧಿಕಾರಿಗಳಿಗಾಗಿ ಜಿಲ್ಲಾಮಟ್ಟದ ಕ್ರಿಕೆಟ್ ಟೂರ್ನಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಬಿಜೆಪಿ ಘಟಕ, ತಾಲೂಕು ಮಂಡಲದ 20 ತಂಡಗಳು ಭಾಗವಹಿಸಲಿವೆ ಎಂದರು.

  ಈಗಾಗಲೇ ತಂಡಗಳು ಕಳೆದ 15 ದಿನಗಳಿಂದ ಅಭ್ಯಾಸದಲ್ಲಿ ನಿರತವಾಗಿವೆ. ಟೂರ್ನಿಯಲ್ಲಿ 4 ಮಹಿಳಾ ತಂಡಗಳು ಭಾಗವಹಿಸುತ್ತಿರುವುದು ವಿಶೇಷ ಎಂದು ತಿಳಿಸಿದರು.

  ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ, ಕಳೆದ ಮೂರ‌್ನಾಲ್ಕು ತಿಂಗಳುಗಳಿಂದ ಬೂತ್ ಸಮಿತಿಯಲ್ಲಿ ವಿಸ್ತಾರಕ ಯೋಜನೆಗಳನ್ನು ನಡೆಸಿದ್ದೇವೆ. 1502 ಬೂತ್‌ನಲ್ಲಿ ಈ ಕೆಲಸವಾಗಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಕಾರ್ಯಕರ್ತರನ್ನು ಸದೃಢಗೊಳಿಸುವ ದೃಷ್ಟಿಯಿಂದ ಟೂರ್ನಿಯನ್ನು ಏರ್ಪಡಿಸಲಾಗಿದೆ ಎಂದರು.

  ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡ 1,1,111 ರೂ. ನಗದು, ಸ್ಮರಣಿಕೆ ಪಡೆಯಲಿದೆ. ರನ್ನರ್ ಅಪ್ ಆಗುವ ತಂಡ 55,555 ರೂ. ನಗದು ಪಡೆಯಲಿದೆ.

  ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ
  ಯೂಟ್ಯೂಬ್, ಫೇಸ್‌ಬುಕ್‌ನಲ್ಲಿಯೂ ಲೈವ್ ಪ್ರಸಾರವಾಗಲಿದೆ. ಮಹಾಶಕ್ತಿ ಕೇಂದ್ರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಪಸರಿಸಲಾಗುವುದು. ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ 15 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಎಲ್ಲರಿಗೂ ಊಟದ ವ್ಯವಸ್ಥೆ ಇರುತ್ತದೆ ಎಂದು ಎ.ಮುರಳಿ ತಿಳಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts