More

  ವಯನಾಡ್: ರಾಹುಲ್​ ಗಾಂಧಿ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್‌ ಸ್ಪರ್ಧೆ

  ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಯನಾಡ್​ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇರಳದ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಅವರು ಸ್ಪರ್ಧಿಸಲಿದ್ದಾರೆ.

  ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್: ಕಾರಣ ಹೀಗಿದೆ!

  ವಯನಾಡ್​ 2009 ರಿಂದ ಕಾಂಗ್ರೆಸ್​ನ ಭದ್ರಕೋಟೆಯಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಠಿಯಲ್ಲಿ ಮತ್ತು ವಯನಾಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋತಿದ್ದರೂ, ವಯನಾಡಿನಲ್ಲಿ ಅವರು ಗೆದ್ದು ಬೀಗಿದ್ದರು.

  ಈ ಬಾರಿ ರಾಹುಲ್ ಅವರ ಪ್ರತಿಸ್ಪರ್ಧಿ ಸುರೇಂದ್ರನ್ ಅವರು ಕೇರಳದ ರಾಜಕೀಯ ಕ್ಷೇತ್ರದಲ್ಲಿ ಪ್ರಬಲವಾದ ಕಾಂಗ್ರೆಸ್-ಎಡ ಮೈತ್ರಿಗೆ ಸವಾಲು ಹಾಕುವ ಕೆಲಸ ಮಾಡುತ್ತಲ್ಲೇ ಇರುತ್ತಾರೆ. INDIA ಮೈತ್ರಿಕೂಟದ ಭಾಗವಾಗಿದ್ದರೂ, ದಕ್ಷಿಣ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ತೀವ್ರ ಪ್ರತಿಸ್ಪರ್ಧಿಗಳಾಗಿ ಉಳಿದಿವೆ.

  2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸುರೇಂದ್ರನ್ ಪತ್ತನಂತಿಟ್ಟ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಕಾಂಗ್ರೆಸ್ ಮತ್ತು ಎಡಪಕ್ಷಗಳ ಕಾಂಗ್ರೆಸ್ ಮತ್ತು ಎಡ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದ ಇವರು ಮೂರನೇ ಸ್ಥಾನ ಪಡೆದಿದ್ದರು. ಅವರು 2016ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರಂನಿಂದ ಕೇವಲ 89 ಮತಗಳಿಂದ ಸೋತಿದ್ದರು. ಅವರು 2019 ರಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

  ಸುರೇಂದ್ರನ್ ಅವರು 2020 ರಲ್ಲಿ ಬಿಜೆಪಿ ಕೇರಳ ಘಟಕದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಶಬರಿಮಲೆ ದೇವಸ್ಥಾನಕ್ಕೆ ಯುವತಿಯರ ಪ್ರವೇಶದ ವಿರುದ್ಧ ಪ್ರತಿಭಟನೆಗಳನ್ನು ಮುನ್ನಡೆಸಿ ಮುನ್ನಲೆಗೆ ಬಂದಿದ್ದರು.

  2019 ರಲ್ಲಿ ರಾಹುಲ್ ಗಾಂಧಿ ನಾಲ್ಕು ಲಕ್ಷ ಮತಗಳ ಅಂತರದಿಂದ ಗೆದ್ದಿರುವ ಕ್ಷೇತ್ರವಾದ ವಯನಾಡ್‌ನಲ್ಲಿ ಈ ಬಾರಿ ಅವರ ಪ್ರತಿಸ್ಪರ್ಧಿ ಬಿಜೆಪಿ ಕೇರಳದ ಮುಖ್ಯಸ್ಥ ಕೆ ಸುರೇಂದ್ರನ್, ಅವರು ಕಾಂಗ್ರೆಸ್ ಸಂಸದ “ಅಮೇಠಿಯಲ್ಲಿ ಸೋತಂತೆ ಸೋಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ಕೇರಳದಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸ್ಪರ್ಧಿಸುತ್ತಿರುವ ವಯನಾಡ್ ಕ್ಷೇತ್ರದಲ್ಲಿ ಬಿಜೆಪಿ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದರೆ ಎಡರಂಗವು ಹಿರಿಯ ಸಿಪಿಐ ನಾಯಕಿ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ.

  ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯ ಆಸೆ ತೋರಿಸಿ ಯುವತಿಗೆ 2.7 ಕೋಟಿ ರು. ಪಂಗನಾಮ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts