More

    ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಣೆ, ಅಭಿನಂದನೆ ಸ್ವೀಕರಿಸಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿಕೆ

    ಮಂಗಳೂರು: ಬಾಲ್ಯದಿಂದಲೇ ಆರೆಸ್ಸೆಸ್, ಜನಸಂಘ, ಬಿಜೆಪಿಯೊಂದಿಗೆ ಬೆಳೆದವನಾಗಿದ್ದರಿಂದ ಪಕ್ಷದ ವಿಚಾರಧಾರೆಗಳನ್ನು ತಿಳಿಯಲು ಸಾಧ್ಯವಾಗಿದೆ. ರಾಜಕೀಯಕ್ಕೆ ಬರಲು ಅಪ್ಪನೇ ಪ್ರೇರಣೆ. ಆದರೆ ದೊಡ್ಡ ಹುದ್ದೆ, ಸ್ಥಾನಮಾನಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ ಎಂದು ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾದ ಪ್ರತಾಪಸಿಂಹ ನಾಯಕ್ ಹೇಳಿದರು.

    ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
    ದೊಡ್ಡ ಜವಾಬ್ದಾರಿ ನನ್ನ ಹೆಗಲೇರಿದ್ದು, ಪಕ್ಷ ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ದ್ರೋಹವಾಗದಂತೆ, ಜಿಲ್ಲೆಯ ಜನರ ನಿರೀಕ್ಷೆಗೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.

    ಪಕ್ಷದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ಜಿಲ್ಲೆಯ ಪ್ರಮುಖ ವಿಭಾಗಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಎಲ್ಲ ಸವಾಲಿನ ಮಧ್ಯೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಎಲ್ಲರೂ ಒಟ್ಟಾಗಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಹೇಳಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅಭಿನಂದನಾ ಭಾಷಣ ಮಾಡಿದರು. ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಶಾಸಕ ಡಿ.ವೇದವ್ಯಾಸ ಕಾಮತ್, ಹರೀಶ್ ಪೂಂಜ, ಸಂಜೀವ ಮಠಂದೂರು, ಡಾ.ವೈ.ಭರತ್ ಶೆಟ್ಟಿ, ಮೇಯರ್ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾಗತಿಸಿ, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ವಂದಿಸಿದರು. ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ನಿರೂಪಿಸಿದರು.

    ರವಿಶಂಕರ್, ಹರಿಕೃಷ್ಣರಿಗೂ ಅಭಿನಂದನೆ: ಮುಡಾ ಅಧ್ಯಕ್ಷರಾಗಿ ನೇಮಕಗೊಂಡ ರವಿಶಂಕರ್ ಮಿಜಾರ್ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರನ್ನು ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದರು. ಜನಸಂಘ ಸಂಸ್ಥಾಪಕ ಶ್ಯಾಮ್‌ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನ ಮತ್ತು ಕರ್ನಾಟಕದಲ್ಲಿ ಜನಸಂಘ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಗನ್ನಾಥ ರಾವ್ ಜೋಶಿ ಜನ್ಮದಿನದ ಹಿನ್ನೆಲೆಯಲ್ಲಿ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts