More

    ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಭೇಟಿಯಾದ ಕತ್ತಿ ಸಹೋದರರು

    ಬೆಳಗಾವಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಶಾಸಕ ಉಮೇಶ ಕತ್ತಿ ಮತ್ತು ಮಾಜಿ ಲೋಕಸಭಾ ಸದಸ್ಯ ರಮೇಶ ಕತ್ತಿ ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು.

    ರಾಜ್ಯದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಾಗೂ ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಕತ್ತಿ ಸಹೋದರರು ತಮಗಾದ ಅನ್ಯಾಯ ಸರಿಪಡಿಸುವಂತೆ ನಡ್ಡಾ ಅವರನ್ನು ಕೋರಿದರು.

    ಲೋಕಸಭಾ ಚುನಾವಣೆ ಸಮಯದಲ್ಲಿ ರಮೇಶ ಕತ್ತಿ ಅವರಿಗೆ ಟಿಕೆಟ್ ನೀಡುವುದನ್ನು ಬಿಟ್ಟು ಅಣ್ಣಾಸಾಹೇಬ ಜಿೂಲ್ಲೆ ಅವರಿಗೆ ಟಿಕೆಟ್ ನೀಡಿದ ವಿಷಯವನ್ನೂ ಅಧ್ಯಕ್ಷರಿಗೆ ತಿಳಿಸಿದರು. ನಮಗೆ ಯಾಕೆ ಹೀಗೆ ಪದೇ ಪದೆ ತೊಂದರೆ ಆಗುತ್ತಿದೆ. ರಾಜ್ಯದಲ್ಲಿ ನಮ್ಮ ಅಣ್ಣ ಉಮೇಶ ಕತ್ತಿ ಹಿರಿಯ ಶಾಸಕರಾಗಿದ್ದರೂ ಅವರು ಸಚಿವ ಸ್ಥಾನ ಕೇಳಿರಲಿಲ್ಲ. ಆದರೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಉಮೇಶ ಕತ್ತಿ ಅವರನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಸಚಿವ ಸ್ಥಾನ ನೀಡಲಿಲ್ಲ. ಹಾಗಾಗಿ ನಮಗೆ ಆಗಿರುವ ಸಮಸ್ಯೆಯನ್ನು ತಕ್ಷಣ ಸರಿಪಡಿಸಿ. ಮುಂದೆ ನಮ್ಮ ಮೇಲೆ ನಿಮ್ಮ ಅಪವಾದ ಬೇಡ ಎಂದು ರಮೇಶ ಕತ್ತಿ ಸ್ಪಷ್ಟಪಡಿಸಿದರು.

    ಅದಕ್ಕೂ ಮೊದಲು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರನ್ನು ಭೇಟಿ ಮಾಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಗುರುವಾರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಸಂಪೂರ್ಣ ವಿವರ ನೀಡುತ್ತೇವೆ ಎಂದು ನಡ್ಡಾ ಅವರಿಗೆ ಕತ್ತಿ ಸಹೋದರರು ತಿಳಿಸಿದರು. ನೀವು ಗುರುವಾರ ಅಮಿತ್ ಷಾ ಅವರನ್ನು ಭೇಟಿಯಾಗಿ ಎಂದು ತಿಳಿಸಿದ ಜೆ.ಪಿ.ನಡ್ಡಾ ಸ್ವತಃ ಅವರೇ ಸಮಯ ನಿಗದಿ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts