ನುಡಿದಂತೆ ನಡೆಯದಿದ್ದರೆ ಶಿಸ್ತುಕ್ರಮ - ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯೆ

Published on

ಪುತ್ತೂರು: ನಗರಸಭಾ ಸದಸ್ಯ ಜಗನ್ನಿವಾಸ್ ರಾವ್ ಪುತ್ರನಿಂದ ನಡೆದ ಘಟನೆ ವಿಚಾರದಲ್ಲಿ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳು ಸುಮ್ಮನೆ ಕೂರಲಿಲ್ಲ. ಘಟನೆ ಬಳಿಕ ಆರೋಗ್ಯಕರ ರೀತಿಯಲ್ಲಿ ಮಾತುಕತೆ ನಡೆದಿದೆ. ಬೇರೆ ಆಯಾಮಗಳು ಪಡೆಯಬಾರದೆಂಬ ಕಾರಣಕ್ಕೆ ಪ್ರತಿಕ್ರಿಯೆ ನೀಡಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಘಟನೆ ವಿಚಾರದಲ್ಲಿ ಬಿಜೆಪಿ ಹಾಗೂ ಪರಿವಾರ ಸಂಘಟನೆಯ ನಿಲುವು ಸ್ಪಷ್ಟವಿದೆ. ಪಕ್ಷ ಸಂತ್ರಸ್ತೆಯ ಪರವಾಗಿ ನಿಲ್ಲುತ್ತದೆ. ಜಗನ್ನಿವಾಸ್ ರಾವ್ ಜತೆಗೆ ಪಕ್ಷದ ಕಡೆಯಿಂದ ಮಾತುಕತೆಗಳು ನಡೆದಿದ್ದು, ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸೂಚಿಸಲಾಗಿದೆ. ಇದಕ್ಕೆ ಒಪ್ಪಿಕೊಳ್ಳದಿದ್ದರೆ, ಅವರ ಮೇಲೆಯೂ ಅಗತ್ಯ ಕ್ರಮಕೈಗೊಳ್ಳುತ್ತೇವೆ. ಮಗುವಾದ ಬಳಿಕ ಮದುವೆ ಮಾಡಿಸಿಕೊಳ್ಳುವುದು ಅವರ ಜವಾಬ್ದಾರಿ. ಸಂತ್ರಸ್ತೆಗೆ ಯಾವುದೇ ಅನ್ಯಾಯವಾಗಬಾರದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಪ್ರಸಾದ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net