More

    ನಾಳೆ ರೈತ ಸಮಾವೇಶ

    ಚಾಮರಾಜನಗರ: ಬಿಜೆಪಿ ರೈತ ಮೋರ್ಚಾ ವತಿಯಿಂದ ಏ.11ರಂದು ಜಿಲ್ಲಾಮಟ್ಟದ ಸಮಾವೇಶ ನಡೆಯಲಿದೆ ಎಂದು ಮೋರ್ಚಾದ ಅಧ್ಯಕ್ಷ ಎಸ್.ಎಂ.ಮಲ್ಲಿಕಾರ್ಜುನ ತಿಳಿಸಿದರು.


    ಅಂದು ನಗರದ ಹೊರವಲಯದಲ್ಲಿರುವ ಸೂರ್ಯೋದಯ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶವನ್ನು ರೈತಮೋರ್ಚಾದ ರಾಜ್ಯಾಧ್ಯಕ್ಷ ವೀರಣ್ಣ ಕರಡಿ ಉದ್ಘಾಟಿಸುವರು. ರಾಜ್ಯಸಭಾ ಸದಸ್ಯ ಜಗದೀಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಪ್ರಧಾನಮಂತ್ರಿ ನರೇಂದ್ರಮೋದಿ, ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಜಾರಿಗೆ ತಂದಿರುವ ರೈತಪರ ಯೋಜನೆಗಳು, ರೈತರ ಬದುಕಿನಲ್ಲಿ ಪ್ರಗತಿಯನ್ನು ಸಾಧಿಸಲು ಸಹಕಾರಿಯಾಗಿವೆ. ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 6 ಸಾವಿರ ರೂ.ಹಾಗೂ ರಾಜ್ಯಸರ್ಕಾರದಿಂದ 4 ಸಾವಿರ ರೂ. ಒಟ್ಟು 10 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಹೇಳಿದರು.


    ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಕೂಡಲೇ ವಿದ್ಯಾನಿಧಿ ಜಾರಿ ಮಾಡಿ ರಾಜ್ಯದ ಎಲ್ಲ ರೈತ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇವೆಲ್ಲವೂ ಸಹ ರೈತಪರ ಯೋಜನೆಗಳಾಗಿದ್ದು, ಈ ಬಾರಿಯು ಸಹ ರೈತರು ಬಿಜೆಪಿಗೆ ಮತ ನೀಡಲಿದ್ದಾರೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಗೆಲುವು ಸಾಧಿಸಲಿವೆ ಎಂದರು. ಜಿಲ್ಲಾಮಟ್ಟದ ಸಮಾವೇಶದಲ್ಲಿ ಸುಮಾರು 3 ಸಾವಿರ ರೈತರು ಭಾಗವಹಿಸುವ ನಿರೀಕ್ಷೆ ಇದೆ. ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.


    ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಎಚ್.ಎಂ.ಬಸವಣ್ಣ, ಜಿಲ್ಲಾ ಉಪಾಧ್ಯಕ್ಷ ಕೆಲ್ಲಂಬಳ್ಲಿ ಕೆ.ಎಸ್.ನಾಗರಾಜು, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸಾಗಡೆ ನಾಗರಾಜಪ್ಪ, ಹನೂರು ಮಂಡಲ ಅಧ್ಯಕ್ಷ ಶಿವಸ್ವಾಮಿ, ಚಾಮರಾಜನಗರ ಗ್ರಾಮಾಂತರ ಮಂಡಲ ಅಧ್ಯಕ್ಷ ಸುಂದರ್, ಗಣೇಶ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts