ಕಣಿಯೂರು ಗ್ರಾಪಂನಲ್ಲಿ ಮನವಿ ಸಲ್ಲಿಕೆ

New Project (35)
Published on

ಬೆಳ್ತಂಗಡಿ: ಬಿಜೆಪಿ ಕಣಿಯೂರು ಮತ್ತು ಉರುವಾಲು ಶಕ್ತಿಕೇಂದ್ರದ ವತಿಯಿಂದ ಕಣಿಯೂರು ಗ್ರಾಪಂ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ಮುಖಂಡರಾದ ಶಾರದಾ ಆರ್. ರೈ, ವಿಜಯ ಕುಮಾರ್ ಕಳ್ಳಲಿಕೆ, ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಹೇಶ್, ಕಣಿಯೂರು ಗ್ರಾಪಂ ಅಧ್ಯಕ್ಷ ಸೀತಾರಾಮ ಮಡಿವಾಳ ಮಾತನಾಡಿದರು.

ಪಿಡಿಒ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪನೆಕ್ಕರ, ಉರುವಾಲು ಶಕ್ತಿ ಕೇಂದ್ರ ಪ್ರಮುಖ್ ಕೃಷ್ಣಪ್ರಸಾದ್, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ, ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪನೆಕ್ಕರ, ತಣ್ಣೀರುಪಂತ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸುನಿಲ್ ಅನಾವು, ಕಣಿಯೂರು ಗ್ರಾಪಂ ಉಪಾಧ್ಯಕ್ಷೆ ಜಾನಕಿ ಪಿಂಡಿವನ, ಮಾಜಿ ಅಧ್ಯಕ್ಷೆ ಗಾಯತ್ರಿ ಗೌಡ, ಪದ್ಮುಂಜ ಮಿಲ್ಕ್ ಸೊಸೈಟಿ ಅಧ್ಯಕ್ಷ ಪುರುಷೋತ್ತಮ್ ಗೌಡ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net