More

    ರಾಜ್ಯದಲ್ಲಿ ಕುಸಿದ ಕಾನೂನು-ಸುವ್ಯವಸ್ಥೆ: ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು

    ಬೆಂಗಳೂರು: ಬೆಳಗಾವಿ ಜಿಲ್ಲೆಯ ಜೈನಮುನಿ ಬರ್ಬರ ಹತ್ಯೆ, ಮೈಸೂರು ಜಿಲ್ಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ ಕೊಲೆ ಖಂಡಿಸಿ, ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿ ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಪ್ರತಿಪಕ್ಷ ಬಿಜೆಪಿ ಬುಧವಾರ ಪ್ರತಿಭಟನೆ ನಡೆಸಿತು.

    ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಮಾಜಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಕೊಲೆಗಳ ಭಾಗ್ಯ ನೀಡಿದ ಕೊಲೆಗಡುಕ ಸರ್ಕಾರವೆಂದು ಕಿಡಿಕಾರಿದರು.

    ಇದನ್ನೂ ಓದಿ: ಬಿಬಿಎಂಪಿಯಲ್ಲಿ ಮೇಜರ್ ಸರ್ಜರಿಗೆ ಮುಂದಾದ ಡಿಸಿಎಂ; ಆರ್​​​ಆರ್ ನಗರ ವಲಯಕ್ಕೆ ನೂತನ ಅಧಿಕಾರಿಗಳ ನೇಮಕ

    ಜೈನಮುನಿಗಳನ್ನು ಅಮಾನುಷವಾಗಿ ಕೊಂದವರಿಗೆ ಗಲ್ಲು‌ ಶಿಕ್ಷೆ ವಿಧಿಸಿ, ಹಿಂದು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ ಧಿಕ್ಕಾರ ಮೊಳಗಿಸಿ ಪ್ರದರ್ಶನ ಫಲಕಗಳನ್ನು ಪ್ರದರ್ಶಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸಿ, ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ಸರ್ಕಾರ ತೊಡಗಿದ್ದು, ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾಜಿ ಸಿಎಂ ಬೊಮ್ಮಾಯಿ‌ ಮಾತನಾಡಿ ಕಾಂಗ್ರೆಸ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಜೈನಮುನಿ ಬರ್ಬರ ಹತ್ಯೆ ಹಾಗೂ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ ಹತ್ಯೆ ಪ್ರಕರಣಗಳು ನಿದರ್ಶನವೆಂದು ವಾಗ್ದಾಳಿ ನಡೆಸಿದರು.

    ರಾಜ್ಯಪಾಲರಿಗೆ ದೂರು

    ನಂತರ ಪ್ರದರ್ಶನ ಫಲಕಗಳನ್ನು ಹಿಡಿದು, ಕೊಲೆಪಾತಕರು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸುತ್ತಾ ಪಾದಯಾತ್ರೆಯಲ್ಲಿ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದರು.

    ಜೈನಮುನಿ ಭೀಕರ ಹತ್ಯೆ ಮರುದಿನವೇ ಹಿಂದು ಕಾರ್ಯಕರ್ತನ ಗುರಿಯಾಗಿಸಿ ಹತ್ಯೆ ಮಾಡಲಾಗಿದ್ದು, ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಬಿಜೆಪಿ ಆರೋಪಿಸಿದ್ದು, ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ಜತೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರಿಗೆ ಕೋರಿದೆ.

    ಇದನ್ನೂ ಓದಿ: ಅಭಿಮಾನಿಗಳೊಂದಿಗೆ ರಹಸ್ಯ ಸಭೆ ನಡೆಸಿದ ವಿಜಯ್​: ಫ್ಯಾನ್ಸ್​ಗೆ ಇಳಯ ದಳಪತಿ ಕೊಟ್ಟ ಟಾಸ್ಕ್​ ಹೀಗಿದೆ…

    ಮಾಜಿ ಸಚಿವರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಪಕ್ಷದ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿ, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

    ಭಾರೀ ಮಳೆಗೆ ಹಿಮಾಚಲ ಪ್ರದೇಶ ತತ್ತರ: ಡ್ರೋನ್​ ಕ್ಯಾಮೆರಾದಲ್ಲಿ ಪ್ರವಾಹದ ಭಯಾನಕ ದೃಶ್ಯಗಳು ಸೆರೆ!

    ಮಹಿಳೆಯ ಹೊಟ್ಟೆ ಸ್ಕ್ಯಾನ್​ ಮಾಡಿದಾಗ ವೈದ್ಯರಿಗೆ ಕಾದಿತ್ತು ಶಾಕ್! ಪತ್ತೆಯಾಯ್ತು 11.5 ಕೆ.ಜಿ. ಗಡ್ಡೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts