More

    ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನಾ ಮೆರವಣಿಗೆ

    ಗುಂಡ್ಲುಪೇಟೆ: ಕಾಂಗ್ರೆಸ್‌ನ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಪಂಪ್‌ಸೆಟ್‌ಗಳಿಗೆ ದಿನಕ್ಕೆ ಕೇವಲ ಎರಡು ಗಂಟೆ ವಿದ್ಯುತ್ ನೀಡುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿದರು. ಪ್ರತಿದಿನ ಕನಿಷ್ಠ 8 ಗಂಟೆ ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.

    ಈ ವೇಳೆ ಮನವಿ ಸ್ವೀಕರಿಸಲು ಬಂದ ಸೆಸ್ಕ್ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ನೀವು ಸಮಸ್ಯೆ ಬಗೆಹರಿಸುವ ಬದಲು ಕೇವಲ ಭರವಸೆ ಕೊಡುವುದರಲ್ಲಿಯೇ ಕಾಲಕಳೆಯುತ್ತಿದ್ದೀರಿ. ಅನಿಯಮಿತ ವಿದ್ಯುತ್ ಕಡಿತದಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಕೃಷಿ ಪಂಪ್‌ಸೆಟ್‌ಗಳಿಗೆ ಕೇವಲ ಎರಡು ಗಂಟೆ ವಿದ್ಯುತ್ ಸರಬರಾಜು ಮಾಡುತ್ತಿದ್ದು ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದಂತಾಗಿದೆ. ಆದ್ದರಿಂದ ನಮ್ಮ ಮನವಿ ಆಲಿಸಲು ಜಿಲ್ಲಾಧಿಕಾರಿಯೇ ಬರಬೇಕು ಎಂದು ಒತ್ತಾಯಿಸಿದರು.

    ತಹಸೀಲ್ದಾರ್ ಸೇರಿದಂತೆ ಎಲ್ಲ ಅಧಿಕಾರಿಗಳೂ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ ಯಾವುದೇ ಅಧಿಕಾರಿಯೂ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಜನತಾ ದರ್ಶನ ನಡೆಯುತ್ತಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ತೆರಳಿ ಕಾರ್ಯಕ್ರಮ ಮುಗಿಸಿಕೊಂಡು ಹೊರಬಂದ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ತಹಸೀಲ್ದಾರರನ್ನು ಶಾಸಕ ನಿರಂಜನಕುಮಾರ್ ತರಾಟೆಗೆ ತೆಗೆದುಕೊಂಡರು.

    ಬಿಜೆಪಿ ಮಂಡಲಾಧ್ಯಕ್ಷ ದೊಡ್ಡಹುಂಡಿ ಜಗದೀಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್, ಪುರಸಭೆ ಸದಸ್ಯ ನಾಗೇಶ್, ಮುಖಂಡರಾದ ಎಲ್.ಸುರೇಶ್, ಎಸ್.ನಾಗೇಂದ್ರ, ಮಾಧ್ಯಮ ಸಂಚಾಲಕ ಎಸ್.ಸಿ.ಮಂಜುನಾಥ್, ಚೌಡಹಳ್ಳಿ ನಂಜಪ್ಪ ಸೇರಿದಂತೆ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts