More

    ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರವು ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

    ಇಲ್ಲಿನ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಸ್ತೆ ತಡೆ ಮಾಡಿ ಆಕ್ರೋಶವ್ಯಕ್ತಪಡಿಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟವು ರೈತ, ದಲಿತ, ಮಹಿಳಾ ವಿರೋಽ ನೀತಿಗಳನ್ನು ಅನುಸರಿಸುತ್ತಿದೆ. ಭ್ರಷ್ಟಾಚಾರ ತಾಂಡವಾಡುತ್ತಿದೆ. ನೈತಿಕ ಹೊಣೆಹೊತ್ತು ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
    ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಭ್ರಷ್ಟಚಾರ ತಾಂಡವಾಡುತ್ತಿದೆ ಎಂಬುದಕ್ಕೆ ಗುತ್ತಿಗೆದಾರರ ಮನೆಗಳಲ್ಲಿ ಸಿಕ್ಕಿರುವ ಕೋಟಿ ಕೋಟಿ ಹಣವೇ ಸಾಕ್ಷಿ. ಐಟಿ ದಾಳಿ ವೇಳೆ ಸಿಕ್ಕಿರುವ ಹಣ ಯಾರದು ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.
    ಬಿಜೆಪಿ ಶೇ.೪೦ ಸರ್ಕಾರ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆರೋಪ ಮಾಡುತ್ತಿದ್ದರು. ಆದರೆ, ಇದೀಗ ಅವರದ್ದೇ ಅಧಿಕಾರದಲ್ಲಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರ ಮನೆಯಲ್ಲಿ ೪೨ ಕೋಟಿ ರೂ. ಸೇರಿದಂತೆ ಬೇರೆ ಬೇರೆ ಕಡೆ ಕೋಟ್ಯಂತರ ರೂಪಾಯಿ ಸಿಕ್ಕಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಸಂಗ್ರಹಿಸಿಟ್ಟಿರುವ ಹಣನಾ ಎಂದು ಪ್ರಶ್ನಿಸಿದರು.
    ಪೇಟಿಎಂ, ಪೇಸಿಎಂ, ಪೇ ಸುರ್ಜೇವಾಲ, ಭ್ರಷ್ಟ ಸರ್ಕಾರ ಎಂದು ರಾಜ್ಯದ ಜನತೆ ಲೇವಡಿ ಮಾಡುತ್ತಿದ್ದಾರೆ. ಅವರದ್ದೇ ಪಕ್ಷದವರು ಉಗಿಯುತ್ತಿರುವುದರಿಂದ ಒಂದೇ ಒಂದು ದಿನ ಸಿಎಂ, ಡಿಸಿಎಂ ಅಽಕಾರದಲ್ಲಿ ಇರಲು ಅರ್ಹರಲ್ಲ ಎಂದು ಕಿಡಿಕಾಡಿದರು.
    ರಾಜ್ಯದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಿದೆ. ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋಲಾರ ಜಿಲ್ಲೆಯಲ್ಲಿಯೇ ೪ ತಿಂಗಳಿAದ ೨೪ ಕೊಲೆಗಳಾಗಿವೆ. ಎಸ್‌ಡಿಪಿಐ, ಪಿಎಫ್‌ಐ ಅವರನ್ನು ಓಲೈಸಲು ಕ್ಲಾಕ್ ಟವರ್‌ನಲ್ಲಿ ತಲ್ವಾರ್ ದ್ವಾರಬಾಗಿಲನ್ನು ನಿರ್ಮಿಸಲಾಗಿತ್ತು ಎಂದು ಆರೋಪಿಸಿದರು.
    ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಚೀನಾದವರೊಂದಿಗೆ ಸಂಬAಧ ಇಟ್ಟುಕೊಂಡಿದ್ದರೆ. ಇತ್ತ ಸಿದ್ದರಾಮಯ್ಯ, ಡಿಕೆಶಿ ದೇಶ ವಿರೋಽ ಚಟುವಟಿಕೆಗಳಲ್ಲಿ ತೊಡಗಿರುವ ಉಗ್ರಗಾಮಿಗಳ ಜತೆ ಸಂಪರ್ಕ ಇಟ್ಟುಕೊಂಡು ಕರ್ನಾಟಕದಲ್ಲಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ರೈತರು, ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು. ರೈತರು, ಅಮಾಯಕರ ಮೇಲೆ ಹಾಕುತ್ತಿರುವ ಕೇಸುಗಳನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್, ವಕ್ತಾರ ಎಸ್.ಬಿ.ಮುನಿವೆಂಕಟಪ್ಪ, ಮುಖಂಡರಾದ ಕೆ.ಚಂದ್ರಾರೆಡ್ಡಿ, ಕೃಷ್ಣಾರೆಡ್ಡಿ, ಓಂಶಕ್ತಿ ಚಲಪತಿ, ರಾಜೇಶ್ ಸಿಂಗ್, ಮಾಗೇರಿ ನಾರಾಯಣಸ್ವಾಮಿ, ಸುಂದರ್, ಸಿ.ಡಿ.ರಾಮಚಂದ್ರಗೌಡ, ಬಾಲಾಜಿ, ಮಹೇಶ್, ಕೆಂಬೋಡಿ ನಾರಾಯಣಸ್ವಾಮಿ, ಮಮತಾ ಮುಂತಾದವರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts