ಪಡುಬಿದ್ರಿ: ಪಿಂಚಣಿ ರದ್ದು, 9/11 ಸಮಸ್ಯೆಗಳು ಬಿಜೆಪಿ ಸರ್ಕಾರದ ಕೊಡುಗೆ. ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಅಂದಿನ ಇಂಧನ ಸಚಿವರಾಗಿದ್ದ ಸುನಿಲ್ ಕುಮಾರ್ ಅವರೇ ತಿಳಿಸಿದ್ದರು. ಹೀಗಿರುವಾಗ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವುದು ಹಾಸ್ಯಾಸ್ಪದ ಎಂದು ವಾಜಿ ಸಚಿವ ವಿನಯಕುವಾರ್ ಸೊರಕೆ ಟೀಕಿಸಿದರು. ಕಾಪುವಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಾತನಾಡಿ, ಬಿಜೆಪಿ ನಡೆಸಿದ ಪ್ರತಿಭಟನೆಯ ಉದ್ದೇಶವೇ ಏನೆಂದು ಜನರಿಗೆ ಅರ್ಥವಾಗಿಲ್ಲ. ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮದೇ ಆಡಳಿತದ ವಿರುದ್ಧ ತಾವೇ ಪ್ರತಿಭಟನೆ ನಡೆಸಿ ನಗೆಪಾಟಲಿಗೀ ಡಾಗಿದ್ದಾರೆ. ಕಾಪು ಕ್ಷೇತ್ರಕ್ಕೆ ಗ್ಯಾರಂಟಿ ಯೋಜನೆ ಮೂಲಕ ಕೋಟ್ಯಂತರ ರೂಪಾಯಿ ಹರಿದುಬರುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಬಹುತೇಕ ಬಿಜೆಪಿಗರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೇ ಆಗಿದ್ದಾರೆ ಎಂದರು.
ಸರ್ಕಾರದ ಬಗ್ಗೆ ಕಾಂಗ್ರೆಸ್ ಶಾಸಕರ ಹೇಳಿಕೆ ಪಕ್ಷದೊಳಗಿನ ಆಂತರಿಕ ವಿಚಾರ. ಅವರವರ ಜಿಲ್ಲೆ, ಕ್ಷೇತ್ರಗಳಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಮುಂದೆ ತಿಳಿಸುವ ಪ್ರಯತ್ನ ವಾಡಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುವಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಪಕ್ಷದ ಪ್ರಮುಖರಾದ ಕಾಪು ದಿವಾಕರ ಶೆಟ್ಟಿ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಜ್ ಉಪಸ್ಥಿತರಿದ್ದರು.