More

    ನೇಹಾ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

    ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣ ವಿಲವಾಗಿದ್ದು, ರಾಜ್ಯಪಾಲರು ಕೂಡಲೇ ಮಧ್ಯೆ ಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಭಾನುವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

    ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ನಗರದ ಟಿ.ಸೀನಪ್ಪಶೆಟ್ಟಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು, ಆರೋಪಿ ಯಾಜ್‌ಗೆ ಗಲ್ಲುಶಿಕ್ಷೆ ವಿಧಿಸಬೇಕು. ಪೊಲೀಸರು ಆ ರೀತಿಯಾಗಿ ಪ್ರಕರಣ ದಾಖಲಿಸಬೇಕು. ರಾಜ್ಯದ ಎಲ್ಲ ಮಹಿಳೆಯರಿಗೂ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
    ರಾಜ್ಯದಲ್ಲಿ ಜಿಹಾದಿ ಸಂಸ್ಕೃತಿ ತಲೆ ಎತ್ತುತ್ತಿದ್ದು, ಹಿಂದುಗಳು ತಲೆ ಎತ್ತಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರೀತಿ ಹೆಸರಲ್ಲಿ ಲವ್ ಜಿಹಾದ್ ನಡೆಸಿ ಹಿಂದು ಹೆಣ್ಣು ಮಕ್ಕಳನ್ನು ಮೃತ್ಯುಕೂಪಕ್ಕೆ ತಳ್ಳಲಾಗುತ್ತಿದೆ. ಇಂತಹ ಮನಸ್ಥಿತಿಯವರಿಗೆ ತಕ್ಕಪಾಠ ಕಲಿಸದೇ ಇದ್ದರೆ ಫಯಾಜ್‌ನಂತಹ ಕಿಡಿಗೇಡಿಗಳು ಉದಯಿಸುತ್ತಾರೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.
    ಸಂಸದ ಬಿ.ವೈ.ರಾಘವೇಂದ್ರ, ಎಂಎಲ್‌ಸಿ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿಗೌಡ ಮಲ್ಲಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಗಿರೀಶ್ ಪಟೇಲ್, ರಾಜು ತಲ್ಲೂರು, ಎನ್.ಜಿ.ನಾಗರಾಜ್, ಸುರೇಖಾ ಮುರಳೀಧರ್, ಶಾಂತಾ ಸುರೇಂದ್ರ, ಜ್ಯೋತಿ, ರಶ್ಮಿ ಶ್ರೀನಿವಾಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts