More

    ಸತೀಶ್ ರೈತ ಮೋರ್ಚಾ ತಾಲೂಕು ಅಧ್ಯಕ್ಷ: ನಗರದಲ್ಲಿ ಪದಗ್ರಹಣ ಸಮಾರಂಭ

    ಮಂಡ್ಯ: ಬಿಜೆಪಿ ರೈತ ಮೋರ್ಚಾ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಸತೀಶ್ ಹನಿಯಂಬಾಡಿ ಆಯ್ಕೆಯಾದರು.
    ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರೈತ ಮೋರ್ಚಾದಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಸತೀಶ್ ಪದಗ್ರಹಣ ಮಾಡಿದರು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಂ ಮಾತನಾಡಿ, ಜಿಲ್ಲಾ ರೈತ ಮೋರ್ಚಾದಲ್ಲಿ 8 ಮಂಡಲಗಳಿವೆ. ಅದೇ ರೀತಿ ಶ್ರೀರಂಗಪಟ್ಟಣ ಮಂಡಲದ ಅಧ್ಯಕ್ಷರಾಗಿ ಸಾಮಾಜಿಕ ಕಳಕಳಿ ಇರುವ ಸತೀಶ್ ಅವರನ್ನ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರೈತ ಮೋರ್ಚಾದ ಪಕ್ಷ ಸಂಘಟನೆ ಮತ್ತು ಜಿಲ್ಲೆಯ ರೈತರ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕೆಲಸವನ್ನು ಮಾಡಲಿದ್ದೇವೆ ಎಂದರು.
    ನೂತನ ಅಧ್ಯಕ್ಷ ಸತೀಶ್ ಮಾತನಾಡಿ, ಪಕ್ಷದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಎಲ್ಲ ಪದಾಧಿಕಾರಿಗಳ ಜತೆ ಸೇರಿ ರೈತ ಪರ ಹೋರಾಟಗಳಲ್ಲಿ ಭಾಗಿಯಾಗುತ್ತೇನೆ ಎಂದರು.
    ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಳವಳ್ಳಿ ಅಶೋಕ್‌ಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಪಿ.ಹಳ್ಳಿ ರಮೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts