More

    ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ: ಸ್ವಪಕ್ಷ BJP ವಿರುದ್ಧವೇ ಈರಣ್ಣ ಕಡಾಡಿ ಕಿಡಿ

    ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ರಮೇಶ್ ಜಾರಕಿಹೊಳಿ ವಿರುದ್ಧ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದು, ಪಕ್ಷದ ವಿರುದ್ಧವು ಗುಡುಗಿದ್ದಾರೆ.

    ಅಣೆಕಟ್ಟು ಭೂಮಿ ಪೂಜೆ ವಿಚಾರದಲ್ಲಿ ಆಹ್ವಾನ ನೀಡದೆ ಶಿಷ್ಟಾಚಾರ ಪಾಲಿಸದ ರಮೇಶ್​ ಜಾರಕಿಹೊಳಿ ವಿರುದ್ಧ ಈರಣ್ಣ ಕಡಾಡಿ ಆಕ್ರೋಶ ಹೊರ ಹಾಕಿದ್ದು, ಟ್ವೀಟ್ ಮೂಲಕ​ ಬೆಳಗಾವಿ ಸಾಹುಕಾರ್‌ಗೆ ಹಿಗ್ಗಾಮಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ನಾಯಕರ ವಿರುದ್ಧವೂ ಅಸಮಾಧಾನ ಹೊರ ಹಾಕಿರುವ ಈರಣ್ಣ, ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.

    ಗೋಕಾಕ್ ತಾಲೂಕಿನಲ್ಲಿ ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಮಾರ್ಕಂಡೇಯ ನದಿಗೆ ಯೋಗಿಕೊಳ್ಳದ ಬಳಿ ಅಣೆಕಟ್ಟು ನಿರ್ಮಿಸಲಾಗುತ್ತಿದೆ. ಆದರೆ, ಡ್ಯಾಂ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ರಮೇಶ್​ ಜಾರಕಿಹೊಳಿ ಶಿಷ್ಟಾಚಾರ ಪಾಲಿಸಿಲ್ಲ. ಹೀಗಾಗಿ ಜಾರಕಿಹೊಳಿ ನಡೆಯನ್ನು ಈರಣ್ಣ ತೀವ್ರವಾಗಿ ಖಂಡಿಸಿದ್ದಾರೆ.

    ಇದನ್ನೂ ಓದಿ: ಹಿಂದೆಯೂ ಅಮಾನತಾಗಿದ್ದ ಪ್ರಶಾಂತ್ ಮಾಡಾಳ್ ಕಬಳಿಸಿದ್ದಕ್ಕೆ ಲೆಕ್ಕವೇ ಇಲ್ಲ…

    ಪ್ರತಿಪಕ್ಷದ ಶಾಸಕರೊಬ್ಬರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ಮಾತನಾಡುವ ನಮಗೆ ನಮ್ಮದೇ ಪಕ್ಷದ ಸ್ಥಳೀಯ ಸಂಸದರನ್ನು ಅದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜೊತೆಗೂಡಿಸಿಕೊಂಡು ಹೋಗದಿರುವ ನಮ್ಮ ಹೃದಯ ವೈಶಾಲ್ಯತೆಗೆ ಜನ ಏನಂದಾರು? ಎಂಬ ಕನಿಷ್ಠ ಜ್ಞಾನವಿರಬೇಕು.

    ನಮ್ಮ ಕುಟುಂಬದ ಸದಸ್ಯರು, ನಮ್ಮ ಕಚೇರಿ ಸಿಬ್ಬಂದಿ ಸರ್ಕಾರಿ ಯೋಜನೆಗಳ ಅಡಿಗಲ್ಲು, ಉದ್ಘಾಟನೆ ಮಾಡಬಹುದು ಆದರೆ, ನಾನು ಹೋದಲೆಲ್ಲಾ ಪಕ್ಷ ಬದಲಾಯಿಸಿದಾಗ ನನ್ನ ಜೊತೆಗಿರುವ ನನ್ನ ಬೆಂಬಲಿಗರು ಚುನಾಯಿತ ಪ್ರತಿನಿಧಿಗಳಾಗಿದ್ದರೂ ಕೂಡ ಅವರಿಗೆ ಅವಕಾಶ ನೀಡದಿರುವ ನಮ್ಮ ಬಗ್ಗೆ ಜನ ಏನಂದಾರು ? ಎಂಬ ಕನಿಷ್ಠ ವಿವೇಚನೆ ನಮಗಿರಬೇಕು.

    ಪರಿವಾರ ವಾದವನ್ನು ವಿರೋಧಿಸುವ ಮೌಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು. ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಕೂಡ ಮಣೆ ಹಾಕುವ ಅಗತ್ಯವಿಲ್ಲ. ಇಂಥವರ ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣ ಕುರುಡುತನ ತೋರುವ ನಮ್ಮ ನಾಯಕರು ಬಾರಿ ಬೆಲೆ ತೆರಬೇಕಾದಿತು ಎಂದು ಈರಣ್ಣ ಕಡಾಡಿ ಅವರು ತೀವ್ರ ಕಿಡಿಕಾರಿದ್ದಾರೆ.

    ವಿಶ್ವ ವನ್ಯಜೀವಿ ದಿನ: ಸಂರಕ್ಷಣೆಯಲ್ಲಿ ಸ್ಥಳೀಯರ ಪಾತ್ರ

    ಮೊದಲ ರಾತ್ರಿಯ ಬೆಡ್​ರೂಮ್​ ಫೋಟೋ ಶೇರ್​ ಮಾಡಿಕೊಂಡ ನಟಿ ಸ್ವರಾ ಭಾಸ್ಕರ್​! ಕಾಲೆಳೆದ ನೆಟ್ಟಿಗರು

    ಈ ಒಂದು ಕಾರಣಕ್ಕೆ ನಟ ಶಾರುಖ್​ ಖಾನ್​ ಮಹಿಳಾ ಬಾಡಿಗಾರ್ಡ್ಸ್​ ಹೊಂದಿದ್ದಾರಂತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts