More

  ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

  ನವದೆಹಲಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್​ ಘೋಷಿಸಿದೆ.

  ಬಿಡುಗಡೆ ಮಾಡಲಾಗಿರುವ ಮೂರನೇ ಪಟ್ಟಿಯಲ್ಲಿ ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಕರ್ನಾಟಕದ ಯಾವ ಕ್ಷೇತ್ರಗಳಿಗೂ ಈ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಿಲ್ಲ.

  ಇದನ್ನೂ ಓದಿ: ಸಿಎಸ್​ಕೆ ನಾಯಕತ್ವ ಹಸ್ತಾಂತರಿಸಿದ ಧೋನಿ; ನೂತನ ಸಾರಥಿ ಯಾರು ಗೊತ್ತಾ

  ಮೂರನೇ ಪಟ್ಟಿಯೊಂದಿಗೆ ಬಿಜೆಪಿ ಇಲ್ಲಿವರೆಗೆ ಒಟ್ಟು 276 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುದಂತಾಗುತ್ತದೆ. ಇನ್ನೂ 267 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಿಸಿದ್ದು, 5 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

  ಚೆನ್ನೈ ದಕ್ಷಿಣದಿಂದ ಇತ್ತೀಚೆಗೆ ತೆಲಂಗಾಣ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ತಮಿಳಿಸೈ ಸೌಂದರರಾಜನ್ ಸ್ಪರ್ಧಿಸಲಿದ್ದಾರೆ. ಉಳಿದಂತೆ ಚೆನ್ನೈ ಉತ್ತರ, ಕೃಷ್ಣಗಿರಿ, ವೆಲ್ಲೂರು, ನೀಲಗಿರಿಸ್, ಕೊಯಮತ್ತೂರು, ಪೆರಂಬದೂರು. ತೂತುಕುಡಿ, ಕನ್ಯಾಕುಮಾರಿ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts