More

    ಕಸಾಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ವಿರುದ್ಧವಾಗಿ ನಡ್ಕೊಂಡು ಭಾಜಪ ಜಿಲ್ಲಾ ಕಾರ್ಯಕಾರಿಣಿ ಸದಸ್ಯತ್ವ ಕಳ್ಕೊಂಡ!

    ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್​ಗೆ ಮೊನ್ನೆಯಷ್ಟೇ ನಡೆದಿರುವ ಚುನಾವಣೆಯಲ್ಲಿ ಮಹೇಶ ಜೋಶಿ ಅವರು ಕಸಾಪ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆದರೆ ಈ ಮಧ್ಯೆ ಅವರನ್ನು ಬೆಂಬಲಿಸಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸದಸ್ಯರೊಬ್ಬರು ಅಧಿಕೃತವಾಗಿ ಸದಸ್ಯತ್ವ ಕಳೆದುಕೊಂಡಿದ್ದಾರೆ.

    ಇದನ್ನೂ ಓದಿ: ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿದ್ದ ಎಂ. ಮಹೇಂದ್ರ ಗೌಡ ಎಂಬವರನ್ನು ಪಕ್ಷ ಆ ಸ್ಥಾನದಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ಅಧಿಕೃತವಾಗಿ ಬೆಂಬಲಿಸಿರುವ ಮಹೇಶ ಜೋಶಿ ಅವರ ವಿರುದ್ಧ ಕೆಲಸ ಮಾಡಿದ್ದಲ್ಲದೆ, ಬೇರೊಬ್ಬ ವ್ಯಕ್ತಿಯನ್ನು ಬೆಂಬಲಿಸಿ ವಾಟ್ಸ್​ಆ್ಯಪ್​ ಗ್ರೂಪ್​ಗಳಲ್ಲಿ ಸಂದೇಶ ಹಾಕಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್​.ಆರ್. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ: ಭೀಕರ ಅಪಘಾತ, ಕೆಎಸ್​ಆರ್​ಟಿಸಿಗೆ ಒಟ್ಟು ಮೂವರು ಬಲಿ: 7 ವರ್ಷದ ಬಾಲಕ, ಆತನ ಅಪ್ಪ, 17 ವರ್ಷದ ಅಂಗವಿಕಲೆ ಸ್ಥಳದಲ್ಲೇ ಸಾವು

    ಮಹೇಶ ಜೋಶಿ ಅವರನ್ನು ಬೆಂಬಲಿಸದಿರುವುದರ ಕುರಿತು ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷ ರವಿಕುಮಾರ್ ಅವರೂ ದೂರು ನೀಡಿದ್ದು, ಅಲ್ಲದೆ ತಾವು ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಹಲವಾರು ಬಾರಿ ಸೂಚನೆ ನೀಡಿದ್ದರೂ ತಿದ್ದಿಕೊಂಡಿರದ ಕಾರಣ ಈ ಕ್ರಮಕೈಗೊಳ್ಳಲಾಗಿದೆ. ಅಲ್ಲದೆ ತಾವು ಇನ್ನುಮುಂದೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂಬುದಾಗಿಯೂ ರಮೇಶ್ ತಿಳಿಸಿದ್ದಾರೆ.

    ಗಂಡ-ಹೆಂಡಿರ ಬೇರೆ ಮಾಡಿ ತಾನು ಅಕ್ರಮ ಸಂಬಂಧ ಹೊಂದಿದ ಪೊಲೀಸ್; ನೇಣು ಹಾಕಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆ, ಕಾನ್​ಸ್ಟೆಬಲ್ ಪರಾರಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts