More

    ಬಿಜೆಪಿ ಬಲ ಹೆಚ್ಚಿಸಿದ ಚುನಾವಣೆ ಗೆಲುವು – ಮಹಾಂತೇಶ ಕವಟಗಿಮಠ

    ಬೆಳಗಾವಿ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಪ್ರಜ್ಞಾವಂತ ಮತದಾರ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿರುವುದು ಬಿಜೆಪಿ ಬಲ ಹೆಚ್ಚಿಸಿದೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಧಾನ ಪರಿಷತ್‌ನಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಮತದಾರರ ಸಮಸ್ಯೆಗಳಿಗೆ ಮುಂಬರುವ ದಿನಗಳಲ್ಲಿ ಬಿಎಸ್‌ವೈ ನೇತೃತ್ವದ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ಇದೆ. ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಉಪಚುನಾವಣೆಯಲ್ಲೂ ನಮ್ಮ ಪಕ್ಷ ಜಯಭೇರಿ ಬಾರಿಸಿದೆ.

    ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಮತ್ತು ಜೆೆಡಿಎಸ್ ತಿರಸ್ಕರಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ನೇತೃತ್ವವದಲ್ಲಿ ಮುಂಬರುವ ಚುನಾವಣೆಗಳಲ್ಲಿಯೂ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂದು ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts