ಸಹಕಾರಿ ವಿವಿ ಸ್ಥಾಪನೆ ಗುರಿ - ಸಹಕಾರಿ ಸಮಾವೇಶ ಉದ್ಘಾಟಿಸಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿಕೆ

PTR_8 APR_1
Published on

ಜನರ ಜೀವನದ ಜತೆಗೆ ಸಹಕಾರಿ ಕ್ಷೇತ್ರ ಸಹಜವಾಗಿ ಬೆಳೆದುಬಂದಿದೆ. ಆರ್ಥಿಕವಾಗಿ ಬಲಿಷ್ಠಗೊಳ್ಳುವ ಅಮೃತ ಕಾಲದಲ್ಲಿ ಭಾರತವಿದೆ. ಪ್ರತಿಯೊಂದು ಗ್ರಾಮದಲ್ಲಿ ಸಹಕಾರಿ ಇರಬೇಕೆಂಬ ನಿಟ್ಟಿನಲ್ಲಿ ಕೆಲಸಗಳನ್ನು ಮಾಡಲಾಗುತ್ತಿದೆ. ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯ ಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಪುತ್ತೂರು ಕೋಟೆಚಾ ಹಾಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಕಾರಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ರೈತರಿಗೆ ಸಹಕಾರಿ ಆಗಬೇಕೆಂಬ ನಿಟ್ಟಿನಲ್ಲಿ ವಿವಿಧ ಯೋಜನೆ ಹಾಕಲಾಗಿದೆ. ಸಹಕಾರಿಯನ್ನು ಗಣಕೀಕರಣ ಹಾಗೂ ಡಿಜಿಟಲೀಕರಣಗೊಳಿಸುತ್ತಿದೆ. ಸಮಾಜದ ಕೆಲಸಕ್ಕೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಗುಣವನ್ನು ಹೊಂದಿದ ಜಿಲ್ಲೆ, ಬ್ಯಾಂಕಿಗ್ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಿಕೊಂಡು ಬಂದಿದೆ. ಪಕ್ಷದ ವಿಚಾರಧಾರೆಯನ್ನು ಮನೆಗಳಿಗೆ ತಲುಪಿಸಿದ ಕಾರ್ಯಕರ್ತರ ಶ್ರಮದಿಂದ ಸಹಕಾರಿ ಕ್ಷೇತ್ರದಲ್ಲಿ ಗೆಲುವು ಸಾಧ್ಯವಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಪುತ್ತೂರು ಮಂಡಲ ಪ್ರಭಾರಿ ಸುನೀಲ್ ಆಳ್ವ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ನಗರಸಭೆ ಅಧ್ಯಕ್ಷ ಲೀಲಾವತಿ ಅಣ್ಣ ನಾಯ್ಕ, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ., ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್.ಸಿ.ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸ್ವಾಗತಿಸಿದರು. ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಪ್ರಸ್ತಾವನೆಗೈದರು. ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ವಂದಿಸಿದರು. ಹರಿಪ್ರಸಾದ್ ಯಾದವ್ ಕಾರ್ಯಕ್ರಮ ನಿರೂಪಿಸಿದರು.

ಅಡಕೆ ಎಲೆ ಚುಕ್ಕಿ ಹಾಗೂ ಹಳದಿ ಎಲೆ ರೋಗಕ್ಕೆ ಸರಿಯಾದ ಪರಿಹಾರ ಸಿಕ್ಕಿಲ್ಲ. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಜತೆಗೆ ಸಂಶೋಧನೆ ನಡೆಸಲಾಗುತ್ತಿದೆ. ಅಡಕೆ ಎಲ್ಲ ಪ್ರದೇಶಕ್ಕೆ ವಿಸ್ತರಣೆ ಹೆಚ್ಚಾಗುತ್ತಿದ್ದು, ಬಳಕೆ ಹೆಚ್ಚಾಗುವ ಸಾಧ್ಯತೆ ಕಡಿಮೆಯಿದೆ. ಪರ್ಯಾಯ ಬೆಳೆಯ ಬಗ್ಗೆ ಗಂಭೀರವಾಗಿ ಆಲೋಚಿಸುವ ಜತೆಗೆ ಬೆಳೆಗಾರರರು ಎಚ್ಚರ ವಹಿಸಬೇಕು. ಕಾಫಿ ಬೆಳೆ ಬೆಳೆಯುವ ಕಾರ್ಯವಾಗಬೇಕಾಗಿದ್ದು, ಕಾಫಿ ಬೋರ್ಡ್ ಜತೆಗೆ ಜೋಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ.

| ಕ್ಯಾ.ಬ್ರಿಜೇಶ್ ಚೌಟ, ದ.ಕ. ಸಂಸದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net