More

    ರೈತರೆಂದರೆ ರಾಜ್ಯಸರ್ಕಾರಕ್ಕೆ ಅಲಕ್ಷ್ಯ: ಮಾಜಿ ಸಿಎಂ ಡಿ.ವಿ.ಸದಾನಂದಗೌಡ ವಾಗ್ದಾಳಿ

    ಮಂಡ್ಯ: ರಾಜ್ಯ ಸರ್ಕಾರಕ್ಕೆ ರೈತರೆಂದರೆ ಅಲಕ್ಷೃವಾಗಿದೆ. ಆದ್ದರಿಂದ ಕೃಷಿ ಕ್ಷೇತ್ರಕ್ಕೆ ಅಗತ್ಯವಿರುವ ಸೌಲಭ್ಯವನ್ನು ಒದಗಿಸಿಕೊಡಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದರು.
    ತಾಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿ ರೈತರೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಅದರಲ್ಲಿಯೂ ಮಳೆಯಾಶ್ರಿತ ಪ್ರದೇಶದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡುವ ಪ್ರಯತ್ನವನ್ನೇ ಮಾಡುತ್ತಿಲ್ಲ. ಅತ್ತ ಪಂಪ್‌ಸೆಟ್‌ಗಳಿಗೆ ರಾತ್ರಿ ಹೊತ್ತು ತ್ರೀ ಫೇಸ್ ವಿದ್ಯುತ್ ನೀಡಲಾಗುತ್ತಿದ್ದು, ಕಾಡು ಪ್ರಾಣಿಗಳ ಆತಂಕದ ನಡುವೆ ನೀರು ಹಾಯಿಸಲು ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದರು.
    ಈ ನಿಟ್ಟಿನಲ್ಲಿ ಹಗಲು ಹೊತ್ತಿನಲ್ಲಿ ತ್ರೀ ಫೇಸ್ ವಿದ್ಯುತ್ ನೀಡಲು ಕ್ರಮ ವಹಿಸಬೇಕೆಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಬಿಜೆಪಿ ಸಂಘಟಿತ ಹೋರಾಟ ಮಾಡುವ ಮೂಲಕ ರಾಜ್ಯದ ರೈತರ ಬೆನ್ನಿಗೆ ನಿಲ್ಲುತ್ತೇವೆ. ಅದರಂತೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನಡೆಯನ್ನು ಖಂಡಿಸುತ್ತೇವೆ. ಜಿಲ್ಲೆಯಲ್ಲಿ ನಿರಂತರವಾಗಿ ಕಾವೇರಿ ಚಳವಳಿ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತಿಲ್ಲ. ನಮ್ಮ ರೈತರ ಹಿತವನ್ನು ಕಡೆಗಣಿಸಿ ತಮಿಳುನಾಡನ್ನು ಉದ್ಧಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
    ಮಾಜಿ ಶಾಸಕ ಪ್ರೀತಂ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ಜಿಲ್ಲಾ ಕಾರ್ಯದರ್ಶಿ ಡಾ.ಸದಾನಂದ, ವಿದ್ಯಾ ನಾಗೇಂದ್ರ, ನವನೀತ್‌ಗೌಡ, ಶಿವಕುಮಾರ್ ಆರಾಧ್ಯ, ಗ್ರಾಮಸ್ಥರಾದ ಸಿದ್ದೇಗೌಡ, ಅಂಗಡಿ ಮಂಜಣ್ಣ, ಹರೀಶ್, ನಾಗರಾಜು, ರಾಮೇಗೌಡ, ಸಿದ್ದೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts