ಇಂಡಿಯಾ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್: ಎನ್​ಡಿಎ ಮೈತ್ರಿಕೂಟ ಸೇರಿದ ಟಿಡಿಪಿ, ಜನಸೇನಾ!

cbn tdp janasena
Published on

ನವದೆಹಲಿ: ಒಂದೆಡೆ ವಿರೋಧ ಪಕ್ಷಗಳ ಇಂಡಿ ಮೈತ್ರಿ ಕೂಟದಲ್ಲಿ ದಿನಕ್ಕೊಂದು ಪಕ್ಷಗಳು ಅಪಸ್ವರ ತೆಗೆಯುತ್ತಿರುವ ಮಧ್ಯೆ, ಇನ್ನೊಂದೆಡೆ ಆಡಳಿತಾರೂಢ ಎನ್‌ಡಿಎ ಮೈತ್ರಿ ಕೂಟದಲ್ಲಿ ಪಕ್ಷಗಳ ಸಂಖ್ಯಾ ಬಲ ಹೆಚ್ಚಾಗುತ್ತಿದೆ.

ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಬಿಜೆಪಿ ಮತ್ತು ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಮೈತ್ರಿ ವಿಚಾರ ಇದೀಗ ಅಂತಿಮಗೊಂಡಿದೆ. ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಷಾ ರನ್ನು ಭೇಟಿಯಾಗಿ ಜೆಡಿಎಸ್ ಬಿಜೆಪಿ ಮೈತ್ರಿ ಮಾತುಕತೆ ನಡೆಸಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್​ ಹಾಜರಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು, ಬಿಜೆಪಿ ಜೊತೆ ಮೈತ್ರಿ ಖಚಿತ ಪಡಿಸಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ, ಟಿಡಿಪಿ, ಜನಸೇನಾ ಮೈತ್ರಿ ಖಚಿತವಾದ ಕೆಲವೇ ಗಂಟೆಗಳಲ್ಲಿ ಎನ್ ಚಂದ್ರಬಾಬು ನಾಯ್ಡು ಮಾಧ್ಯಮಗಳ ಜೊತೆ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಆಂಧ್ರ ಪ್ರದೇಶದ ಸರ್ಕಾರ ಭ್ರಷ್ಟಚಾರದಲ್ಲಿ ಮುಳಗಿದೆ. ಬಿಜೆಪಿ ಮತ್ತು ಟಿಡಿಪಿ ಮೈತ್ರಿಯಿಂದ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಗೆಲುವು ಸುಲಭವಾಗಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದರು. ಮುಂಬರುವ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದಲ್ಲಿ ಮೈತ್ರಿಕೂಟವು ಚುನಾವಣೆಲ್ಲಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದ ಅವರು, ಆಂಧ್ರದಲ್ಲಿ ಅಧಿಕಾರದಲ್ಲಿರುವ ವೈಎಸ್ಆರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇತ್ತ ಆಂಧ್ರ ಪ್ರದೇಶದಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿಪಿ ವಿರುದ್ಧ ಜಂಟಿ ಹೋರಾಟ ಮಾಡಲು ಟಿಡಿಪಿ ಹಾಗೂ ಜನಸೇನಾ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಜನಸೇನಾ ಪಕ್ಷ ಈಗಾಗಲೇ ಎನ್‌ಡಿಎ ಮೈತ್ರಿ ಕೂಟದಲ್ಲಿದ್ದು, ಈ ಮೈತ್ರಿ ಕೂಟಕ್ಕೆ ಟಿಡಿಪಿ ಕೂಡಾ ಮರು ಸೇರ್ಪಡೆಯಾದರೆ ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಬಲ ಹೆಚ್ಚಲಿದೆ.

ಆಂಧ್ರ ಪ್ರದೇಶ ಸಿಎಂ ಜಗನ್ ಅವರ ತಂಗಿ ಶರ್ಮಿಳಾ ರೆಡ್ಡಿ ಅವರನ್ನು ಆಂಧ್ರ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದಾಗಿ ಆಂಧ್ರ ರಾಜಕೀಯ ರಂಗೇರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net