More

    ಶೃಂಗೇರಿ ಕ್ಷೇತ್ರದಲ್ಲಿ ಮತ್ತೆ ಬಿಜೆಪಿಗೆ ಮುನ್ನಡೆ

    ಎನ್.ಆರ್.ಪುರ: ಗ್ರಾಪಂ ಚುನಾವಣೆಯಲ್ಲಿ ಗೆದ್ದವರು ಮತ್ತೆ 5 ವರ್ಷದ ನಂತರ ಸ್ಥಳೀಯ ನಾಯಕರಾಗಬೇಕು. ಸೋತವರು ಮತ್ತೆ ಚುನಾವಣೆಗೆ ನಿಂತು ಗೆಲ್ಲಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಹೇಳಿದರು.

    ತಾಲೂಕು ಬಿಜೆಪಿಯಿಂದ ನೂತನ ಗ್ರಾಪಂ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಡಿ.ಎನ್.ಜೀವರಾಜ್ ಅಭಿನಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

    ಗ್ರಾಪಂ ಅಭಿವೃದ್ಧಿಗಾಗಿ ಕೇಂದ್ರದಿಂದ ರಾಜ್ಯಕ್ಕೆ ಒಟ್ಟು 31ಸಾವಿರ ಕೋಟಿ ರೂ. ಅನುದಾನ ಬರಲಿದೆ. ಪ್ರತಿ ಗ್ರಾಪಂಗೂ 1 ಕೋಟಿ ರೂ. ಅನುದಾನ ಸಿಗಲಿದೆ. ಶೃಂಗೇರಿ ಕ್ಷೇತ್ರದಲ್ಲಿ 28 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಹಿಡಿಯಲಿದ್ದಾರೆ. 2 ವರ್ಷ 8 ತಿಂಗಳಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಮುನ್ನೆಡೆ ಸಾಧಿಸಿದೆ ಎಂದರು.

    ವೈ.ಎಸ್.ಸುಬ್ರಹ್ಮಣ್ಯ ಮಾತನಾಡಿ, ಮಾಜಿ ಸಚಿವ ಡಿ.ಎನ್.ಜೀವರಾಜ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯದ ಮೇಲೆ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲ ಬಂದಿದೆ. ಗೆದ್ದ ಗ್ರಾಪಂ ಸದಸ್ಯರು ಸರ್ಕಾರದಿಂದ ಬರುವ ಅನುದಾನ ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳಿಗೆ ವಿತರಿಸಬೇಕು ಎಂದು ಸಲಹೆ ನೀಡಿದರು.

    ಜಿಪಂ ಸದಸ್ಯ ರಾಮಸ್ವಾಮಿ ಮಾತನಾಡಿ, ಜೀವರಾಜ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಂತರ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಸಿಕ್ಕ ಆಶಾ ಭಾವನೆ ಮೂಡಿದೆ. ಜ.24 ರಂದು ಕೊಪ್ಪದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಅಶೋಕ್ ಆಗಮಿಸಲಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts