ಸ್ವಾತಂತ್ರ್ಯ ಹೋರಾಟದ ಹೇಳಿಕೆ ವಿವಾದ- ಸಂಸದ ಅನಂತ ಕುಮಾರ್ ಹೆಗಡೆಗೆ ಪಕ್ಷದಿಂದ ಶೋಕಾಸ್ ನೋಟಿಸ್

Nalin Kumar Kateel 1
Published on

ನವದೆಹಲಿ: ಸ್ವಾತಂತ್ರ್ಚ ಹೋರಾಟಕ್ಕೆ ಸಂಬಂಧಿಸಿ ಸಂಸದ ಅನಂತ ಕುಮಾರ್ ಹೆಗಡೆ ನೀಡಿದ್ದ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೆ, ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಮಹಾತ್ಮ ಗಾಂಧಿ ಅವರನ್ನು ಗುರಿಯಾಗಿಸಿ ಸಂಸದ ಅನಂತ ಕುಮಾರ್ ಹೆಗಡೆ ನೀಡಿದ್ದ ಹೇಳಿಕೆ ವಿಚಾರವಾಗಿ ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಪಿಟಿಐ ಈ ಬಗ್ಗೆ ಕಟೀಲು ಅವರಿಂದ ಪ್ರತಿಕ್ರಿಯೆ ಕೋರಿದ ವೇಳೆ ಈ ವಿಚಾರ ತಿಳಿಸಿದ್ದು, ಅವರ ಹೇಳಿಕೆ ತೀವ್ರವಾಗಿ ಟೀಕೆಗೊಳಗಾದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net