More

    ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಕಿಡಿ

    ಶಿವಮೊಗ್ಗ: ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂಬ ಘೋಷವಾಕ್ಯವನ್ನು ಬದಲಿಸಲು ಸರ್ಕಾರ ಮಾಡಿದ್ದ ಆದೇಶ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

    ರಾಷ್ಟ್ರಕವಿ ಕುವೆಂಪು ಅವರ ಸಾಲುಗಳನ್ನು ತುಂಡರಿಸಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಹೊಸ ಪದಗಳನ್ನು ಸೇರಿಸಿರುವುದು ಅಕ್ಷಮ್ಯ. ಒಂದೆಡೆ ಇದು ಕುವೆಂಪು ಅವರಿಗೆ ಮಾಡಿದ ಅವಮಾನ. ಮತ್ತೊಂದು ಕಡೆಯಲ್ಲಿ ಮಕ್ಕಳ ಮನೋಭಾವವನ್ನೇ ಕದಡುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೋಷಿಯಲ್ ಮೀಡಿಯಾ ಮೂಲಕ ಕೆಳಹಂತದವರಿಗೆ ನಿರ್ದೇಶನ ನೀಡಿ ಹಳೆಯ ಸಾಲುಗಳನ್ನು ತುಂಡರಿಸಿ, ಹೊಸ ಸಾಲು ಸೇರುವಂತೆ ಮಾಡಿದ್ದಾರೆ. ವಿಧಾನ ಮಂಡಲದ ಕಲಾಪ ನಡೆಯುತ್ತಿರುವ ಸಂದರ್ಭದಲ್ಲೇ ಇಂತಹ ಕೆಲಸ ನಡೆದಿದೆ. ಆದರೆ ಸರ್ಕಾರ ಇದನ್ನು ಸರಿಪಡಿಸುವ ಬದಲು ಸಮರ್ಥನೆ ಮುಂದಾಗಿದೆ ಎಂದು ದೂರಿದರು.
    ಅಧಿಕಾರಿಗಳ ಈ ನಡೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರೇ ಕಾರಣ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಆಗಿರುವ ತಪ್ಪನ್ನು ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸಿದರು.
    ಪ್ರತಿಭಟನಾಕಾರರನ್ನು ಉದ್ದೇಶಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಎಂಎಲ್‌ಸಿ ಆರ್.ಕೆ.ಸಿದ್ದರಾಮಣ್ಣ ಮಾತನಾಡಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕುಕ್ಕೆ ಪ್ರಶಾಂತ್, ಬಿಜೆಪಿ ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ, ಪ್ರಮುಖರಾದ ದೀನದಯಾಳ್, ಮಂಜುನಾಥ್ ನವುಲೆ, ರಾಹುಲ್ ಬಿದರೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts